ಶಿವಮೊಗ್ಗ : ಶಿವಮೊಗ್ಗ ತಾಲ್ಲೂಕು, ಕುಂಸಿ ಗ್ರಾಮದ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಇರುವುದರಿಂದ ಮಾ. 10 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಈ ಕುರಿಂತೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮಾ.10ರಂದು ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಹಳ್ಳಿಗಳಾದ ಕುಂಸಿ, ಬಾಳೆಕೊಪ್ಪ, ಚೋರಡಿ, ತುಷ್ಟೂರು, ಕೋಣಿಹೂಸೂರು, ಹೊರಬೈಲು ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು ಹಾಗೂ ಹಾರ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಹಾಗೂ ಇನ್ನಿತರೆ ಸುತ್ತಮುತ್ತಲ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿ ಕೋರಲಾಗಿದೆ.
‘ರಾಜ್ಯ ಸರ್ಕಾರ’ದಿಂದ ‘11,307 ಪೌರಕಾರ್ಮಿಕ’ರ ‘ಖಾಯಂ’ ಕುರಿತಂತೆ ಮಹತ್ವದ ಆದೇಶ