ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಸೇರಿದಂತೆ 40 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಗುರುವಾರ ಅಂತಿಮಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.
BREAKING : ಚಾರ್ಮಾಡಿ ಘಾಟ್ ನಲ್ಲಿ ‘KSRTC’ ಬಸ್ ‘ಬ್ರೇಕ್ ಫೇಲ್’ : ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ
ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಿಇಸಿ ಸಭೆಯಲ್ಲಿ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 60 ಲೋಕಸಭಾ ಸ್ಥಾನಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.ದೆಹಲಿ, ಕರ್ನಾಟಕ, ಕೇರಳ, ಛತ್ತೀಸಗಢ, ತೆಲಂಗಾಣ, ಸಿಕ್ಕಿಂ, ತ್ರಿಪುರ, ನಾಗಾಲ್ಯಾಂಡ್, ಮಣಿಪುರ, ಮೇಘಾಲಯ ಮತ್ತು ಲಕ್ಷ್ವದೀಪದ ಲೋಕಸಭೆ ಸ್ಥಾನಗಳ ಕುರಿತು ಚರ್ಚೆಗಳು ನಡೆದವು.
ಶ್ರೀನಗರದಲ್ಲಿ ಕೈಯಿಂದ ನೇಯ್ದ ‘ಪಶ್ಮಿನಾ ಶಾಲು’ ಖರೀದಿಸಿದ ಪ್ರಧಾನಿ ಮೋದಿ
ಕೇರಳದಲ್ಲಿ ಕಾಂಗ್ರೆಸ್ 16 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಉಳಿದ 4 ಸ್ಥಾನಗಳಲ್ಲಿ ಅದರ ಮಿತ್ರಪಕ್ಷಗಳು ಸ್ಪರ್ಧಿಸಲಿವೆ. 16 ಸ್ಥಾನಗಳಲ್ಲಿ ಅಭ್ಯರ್ಥಿಗಳು ಯಾರು ಎಂಬ ಬಗ್ಗೆ ಸಿಇಸಿ ನಿರ್ಧಾರ ಕೈಗೊಂಡಿದೆ. ಶುಕ್ರವಾರ ಎಐಸಿಸಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಿದೆ ಎಂದು ಕಾಂಗ್ರೆಸ್‌ನ ಶಾಸಕಾಂಗ ಪಕ್ಷದ ನಾಯಕ ವಿ.ಡಿ ಸತೀಶನ್ ಹೇಳಿದ್ದಾರೆ.ಮೂಲಗಳ ಪ್ರಕಾರ ರಾಹುಲ್ ಗಾಂಧಿ ಕೇರಳದ ವಯನಾಡು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.
BREAKING :’ಮಹಿಳಾ ದಿನಾಚರಣೆ’ ಪ್ರಯುಕ್ತ ಭರ್ಜರಿ ಗಿಫ್ಟ್ ನೀಡಿದ ಮೋದಿ : ‘LPG’ ಸಿಲಿಂಡರ್ ದರದಲ್ಲಿ 100ರೂ.ಇಳಿಕೆ
ದೆಹಲಿ ಅಭ್ಯರ್ಥಿಗಳ ಬಗ್ಗೆ ಪ್ರಾಥಮಿಕ ಚರ್ಚೆ ನಡೆದಿದೆ. ಅಲ್ಲಿ ಪಕ್ಷವು ಮೂರು ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ‘ಇಂಡಿಯಾ’ ಕೂಟದ ಮಿತ್ರ ಪಕ್ಷ ಎಎಪಿ ಉಳಿದ 4 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಮಾರ್ಚ್ 11 ರಂದು ದೆಹಲಿ ಸ್ಥಾನಗಳ ಕುರಿತು ಮತ್ತೆ ಚರ್ಚೆ ನಡೆಯಲಿದೆ’ ಎಂದು ಎಐಸಿಸಿ ದೆಹಲಿ ಉಸ್ತುವಾರಿ ದೀಪಕ್ ಬಬಾರಿಯಾ ಹೇಳಿದ್ದಾರೆ.ಅಭ್ಯರ್ಥಿಗಳು ಪ್ರಚಾರ ಆರಂಭಿಸಲು ಅನುಕೂಲವಾಗುವಂತೆ ಪಕ್ಷವು ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶೀಘ್ರದಲ್ಲೇ ಘೋಷಿಸುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ .ಸಭೆಯಲ್ಲಿ ಖರ್ಗೆ, ಸೋನಿಯಾ ಗಾಂಧಿ, ವೇಣುಗೋಪಾಲ್ ಹಾಗೂ ಸಿಇಸಿಯ ಇತರ ಹಿರಿಯ ನಾಯಕರು ಉಪಸ್ಥಿತರಿದ್ದರು.