ನವದೆಹಲಿ : ಫೆಬ್ರವರಿ 15 ರಂದು ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸುವ ತನ್ನ ನಿರ್ಧಾರದಲ್ಲಿ ಸುಪ್ರೀಂ ಕೋರ್ಟ್ ಮಾರ್ಚ್ 6 ರೊಳಗೆ ಚುನಾವಣಾ ಆಯೋಗಕ್ಕೆ ನೀಡಿರುವ ಚುನಾವಣಾ ಬಾಂಡ್‌ಗಳ ಬಗ್ಗೆ ಮಾಹಿತಿಯನ್ನು ನೀಡುವಂತೆ ಎಸ್‌ಬಿಐಗೆ ಸೂಚಿಸಿತ್ತು ಮತ್ತು ಮಾರ್ಚ್ 13 ರೊಳಗೆ ಮಾಹಿತಿ ನೀಡುವಂತೆ ಚುನಾವಣಾ ಆಯೋಗವನ್ನು ಕೇಳಿತ್ತು. ಅದನ್ನು ವೆಬ್‌ಸೈಟ್‌ನಲ್ಲಿ ಸಾರ್ವಜನಿಕಗೊಳಿಸಿ ಎಂದು ಹೇಳಿತ್ತು.
ಮಾ.6ರೊಳಗೆ ಚುನಾವಣಾ ಬಾಂಡ್ ಮೂಲಕ ನಡೆದ ವಹಿವಾಟುಗಳನ್ನು ಬಹಿರಂಗ ಮಾಡಬೇಕು ಎಂಬ ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಭಾರತೀಯ ಸ್ಟೇಟ್ ಬ್ಯಾಂಕ್ ನ್ಯಾಯಾಂಗ ನಿಂದನೆ ಮಾಡಿದೆ ಎಂದು ಪ್ರಜಾಸತ್ತಾತ್ಮಕ ಸುಧಾರಣೆಗಳ ಒಕ್ಕೂಟ (ಎಡಿಆರ್) ಎನ್‌ಜಿಒ, ಖ್ಯಾತ ವಕೀಲ ಪ್ರಶಾಂತ್ ಭೂಷಣ್ ಅವರ ಮೂಲಕ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಹಾಕಿದೆ.
ಈ ರಾಶಿಯ ಪುರುಷರಿಗೆ ಮಹಿಳೆಯರು ಹೆಚ್ಚು ಆಕರ್ಷಿತರಾಗುತ್ತಾರಂತೆ ನಿಮ್ಮ ರಾಶಿ ಇದೆಯಾ ನೋಡಿ!
ಇತ್ತೀಚೆಗೆ ಚುನಾವಣಾ ಬಾಂಡ್‌ಗಳನ್ನು ಸುಪ್ರೀಂ ಕೋರ್ಟ್ ನಿರ್ಬಂಧಿಸಿ, ಈ ಬಾಂಡ್ ಖರೀದಿಸಿದವರ ಹೆಸರನ್ನು ಮಾ.6ರೊಳಗೆ ಚುನಾವಣಾ ಆಯೋಗಕ್ಕೆ ನೀಡಬೇಕು ಎಂದು ಎಸ್‌ಬಿಐಗೆ ಆದೇಶಿಸಿತ್ತು. ಆದರೆ ಇದು ಕಷ್ಟದ ಕೆಲಸ ಎಂದಿದ್ದ ಎಸ್‌ಬಿಐ ಜೂ.30ರ ಗಡುವು ಕೇಳಿತ್ತು.ಈ ಬಗ್ಗೆ ಹೇಳಿಕೆ ನೀಡಿರುವ ಭೂಷಣ್, ಎಸ್‌ಬಿಐನವರು ಚುನಾವಣಾ ಬಾಂಡ್ ಕುರಿತ ಮಾಹಿತಿ ಬಹಿರಂಗಗೊಳಿಸಲು ಜೂ.30ರವರೆಗೆ ವಿಸ್ತರಣೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆ ಮಾ.11ರಂದು ನಡೆಯಲಿದ್ದು, ಅದರೊಂದಿಗೆ ಈ ಅರ್ಜಿ ವಿಚಾರಣೆಯೂ ನಡೆಯುವ ಸಾಧ್ಯತೆ ಇದೆ ಎಂದಿದ್ದಾರೆ.
‘ಬಿಜೆಪಿ ಹಟಾವೋ, ಬೇಟಿ ಬಚಾವೋ’: ‘ಅಂತಾರಾಷ್ಟ್ರೀಯ ಮಹಿಳಾ ದಿನದಂದು’ ಪ್ರಧಾನಿ ಮೋದಿ ವಿರುದ್ದ ಹರಿಹಾಯ್ದ ಕಾಂಗ್ರೆಸ್