ಬೆಂಗಳೂರು: ನಗರದಲ್ಲಿ ಹನಿ ನೀರಿಗೂ ಹಾಹಾಕಾರವೆದ್ದಿದೆ. ಜಲಕ್ಷಾಮವೇ ಸಿಲಿಕಾನ್ ಸಿಟಿಯಲ್ಲಿ ಉಂಟಾಗಿದೆ. ಈ ಕಾರಣದಿಂದಾಗಿ ಬೇಕಾಬಿಟ್ಟಿ ನೀರು ವ್ಯರ್ಥ ಮಾಡೋದಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ. ವಾಹನ ತೊಳೆಯುವುದು ಸೇರಿದಂತೆ ಅನಗತ್ಯವಾಗಿ ನೀರನ್ನು ಬಳಕೆ ಮಾಡಿದ್ರೇ 5000 ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ.
ಈ ಸಂಬಂಧ ಬೆಂಗಳೂರು ಜಲ ಮಂಡಳಿಯು ಆದೇಶ ಹೊರಡಿಸಿದ್ದು, ಬೆಂಗಳೂರು ಮಹಾನಗರದಲ್ಲಿ ಖಾಯಂ ವಾಸಿಗಳು ಹಾಗೂ ಬಂದು ಹೋಗುವವರನ್ನು ಸೇರಿಸಿ ಸುಮಾರು 1 ಕೋಟಿ 40 ಲಕ್ಷ ಜನಸಂಖ್ಯೆನ್ನು ಗುರುತಿಸಲಾಗಿದೆ. ಎಲ್ಲರಿಗೂ ಕುಡಿಯುವ ನೀರನ್ನು ಪೂರೈಕೆ ಮಾಡುವುದು ಅವಶ್ಯವಾಗಿರುತ್ತದೆ. ಪ್ರಸ್ತುತ ನಗರದಲ್ಲಿ ಪ್ರತಿದಿನ ಉಷ್ಣಾಂಶ ಏರುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಮಳೆಯ ಕೊರತೆಯಿಂದ ಅಂತರ್ಜಲ ಕುಸಿದಿದೆ ಎಂದು ಹೇಳಿದೆ.
ಬೆಂಗಳೂರು ನಗರದಲ್ಲಿ ನೀರನ್ನು ಪೋಲು ಮಾಡುವುದನ್ನು ತಡೆಗಟ್ಟಲು ಅಗತ್ಯವೆಂದು ಮನಗಂಡು ಕುಡಿಯುವ ನೀರನ್ನು ಸಾರ್ವಜನಿಕರು ಮಿತವಾಗಿ ಬಳಸುವಂತೆ ಖಡಕ್ ಸೂಚನೆ ನೀಡಿದೆ.
ಬೆಂಗಳೂರು ನಗರದ ಜನರು ಬೇಕಾಬಿಟ್ಟಿಯಾಗಿ ನೀರು ವ್ಯರ್ಥ ಮಾಡಬಾರದು. ವಾಹನಗಳ ಸ್ವಚ್ಛತೆಗೆ, ಕೈತೋಟಕ್ಕೆ, ಕಟ್ಟಡ ನಿರ್ಮಾಣ, ರಸ್ತೆ ನಿರ್ಮಾಣ, ಕಾರಂಜಿಗೆ ನೀರು ಬಳಸದಂತೆ ಖಡಕ್ ಸೂಚನೆ ನೀಡಿದೆ.
ಒಂದು ವೇಳೆ ಈ ನಿಯಮವನ್ನು ಉಲ್ಲಂಘನೆ ಮಾಡಿದಲ್ಲೀ, ಉಲ್ಲಂಘನೆ ಮಾಡುವಂತವರ ವಿರುದ್ಧ ಜಲಮಂಡಳಿಯ ಕಾಯ್ದೆ 1964ರ ಕಲಂ 109ರಂತೆ ರೂ.5000ಗಳ ದಂಡ ವಿಧಿಸಲಾಗುವುದು. ಈ ಉಲ್ಲಂಘನೆಯು ಮರುಕಳಿಸಿದಲ್ಲಿ, ದಂಡ ಮೊತ್ತ ರೂ.5000 ಜೊತೆಗೆ, ಹೆಚ್ಚುವರಿಯಾಗಿ 500 ರೂ ಪ್ರತಿದಿನದಂತೆ ದಂಡ ಹಾಕಲಾಗುವುದು ಎಂಬುದಾಗಿ ತಿಳಿಸಿದೆ.
ಸಾರ್ವಜನಿಕರು ಮೇಲ್ಕಂಡ ನಿಷೇಧಗಳನ್ನು ಯಾರಾದರೂ ಉಲ್ಲಂಘನೆ ಮಾಡುವುದು ಕಂಡುಬಂದಲ್ಲಿ, ಕೂಡಲೇ ಮಂಡಳಿಯ ಕಾಲ್ ಸೆಂಟರ್ ಸಂಖ್ಯೆ 1916ಗೆ ಕರೆ ಮಾಡಿ ತಿಳಿಸುವಂತೆ ಕೋರಿದೆ.
ರಾಮೇಶ್ವರಂ ‘ಕೆಫೆ ಬಾಂಬ್ ಸ್ಪೋಟ’ ಪ್ರಕರಣ: ಶಂಕಿತ ನಾಲ್ವರನ್ನು ವಶಕ್ಕೆ ಪಡೆದು ‘NIA ವಿಚಾರಣೆ’
‘ಚುನಾವಣಾ ಬಾಂಡ್’ : ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದ ‘SBI’ ವಿರುದ್ಧ ‘ನ್ಯಾಯಾಂಗ ನಿಂದನೆ’ ಕೇಸ್