ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಖಾಲಿ ಇರುವಂತ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಕೆಇಎ ಕರೆಯಲಾಗಿತ್ತು. ಆದ್ರೇ ಕೆಲ ತಾಂತ್ರಿಕ ಕಾರಣಗಳಿಂದಾಗಿ ಈಗ ಈ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಿದೆ.
ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಆನ್ ಲೈನ್ ಮೂಲಕ ದಿನಾಂಕ 04-03-2024ರಿಂದ ಅರ್ಜಿ ಸಲ್ಲಿಸಬಹುದೆಂದು 21-02-2024ರ ಅಧಿಸೂಚನೆಯಲ್ಲಿ ತಿಳಿಸಲಾಗಿತ್ತು ಎಂದಿದೆ.
ಶುಲ್ಕ ಪಾವತಿಯ ಇಂಟರ್ ಫೇಸ್ ಅನ್ನು ಸಿದ್ಧ ಪಡಿಸುವ ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ. ಆದ್ದರಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿರುತ್ತದೆ ಎಂದು ತಿಳಿಸಿದೆ.
ಇತ್ತೀಚಿನ ಮಾಹಿತಿಗಳಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಪಡೆಯುವಂತೆ ಅಭ್ಯರ್ಥಿಗಳಿಗೆ ಸೂಚಿಸಿದೆ.
Village Administrative officer post-
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸ್ಬಲ್ಪ ತಡವಾಗಲಿದೆ. ಹೊಸ ದಿನಾಂಕವನ್ನು ನಂತರ ತಿಳಿಸಲಾಗುವುದು.@CMofKarnataka@drmcsudhakar pic.twitter.com/HeUYXETFcL— KEA (@KEA_karnataka) March 7, 2024
ರಾಜ್ಯದಲ್ಲಿ ‘ಅಂತಾರಾಷ್ಟ್ರೀಯ ಮಹಿಳಾ ದಿನ’ದಂದೇ ‘ನೀಚ ಕೃತ್ಯ’ ಬೆಳಕಿಗೆ: ‘ಶಾಲಾ ಬಾಲಕಿ’ ಮೇಲೆ ಅತ್ಯಾಚಾರ
BREAKING:ರಾಷ್ಟ್ರಪತಿಗಳಿಂದ ರಾಜ್ಯಸಭೆಗೆ ‘ಸುಧಾಮೂರ್ತಿ’ ನಾಮನಿರ್ದೇಶನ