ಬೆಂಗಳೂರು: ಖಾಸಗಿ ಟ್ಯಾಂಕರ್ ಗಳಿಗೆ ಸಿಗುವ ನೀರು ಸರ್ಕಾರಕ್ಕೆ ಯಾಕೆ ಸಿಗುತ್ತಿಲ್ಲ ಎಂದು ಸಾರ್ವಜನಿಕ ಚರ್ಚೆಯಾಗುತ್ತಿದೆ ಎಂದು ಕೇಳಿದಾಗ, “ಖಾಸಗಿ ಟ್ಯಾಂಕರ್ ಗಳು ಖಾಸಗಿ ಕೊಳವೆ ಬಾವಿಗಳಿಂದ ನೀರು ಪೂರೈಸುತ್ತಿವೆ. ಸರ್ಕಾರದ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ನೀರು ಪೂರೈಸಲಾಗುತ್ತಿದೆ. ದುರಸ್ತಿ ಇದ್ದ ಘಟಕಗಳನ್ನು ರಿಪೇರಿ ಮಾಡುತ್ತಿದ್ದೇವೆ. ಇನ್ನು ಮೂರ್ನಾಲ್ಕು ತಿಂಗಳು ಈ ಸಮಸ್ಯೆ ಇರುತ್ತವೆ. ಎಲ್ಲಾ ಸಮಸ್ಯೆ ಬಗೆಹರಿಸುತ್ತೇವೆ. ನಮಗೆ ನೀರಿನ ಬೆಲೆ ಗೊತ್ತಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಗ್ರಾಮಾಂತರ ಜಿಲ್ಲೆ ಕೊಳವೆ ಬಾವಿ ಮೇಲೆ ಅವಲಂಬಿತ, ಹೀಗಾಗಿ ನೋಡಲ್ ಅಧಿಕಾರಿ ನೇಮಕ
ಬೆಂಗಳೂರು ಗ್ರಾಮಾಂತರ ಭಾಗದ ವಾರ್ಡ್ ಗಳಿಗೆ ನೋಡಲ್ ಅಧಿಕಾರಿ ನೇಮಿಸಿದ್ದು, ಬೇರೆ ಭಾಗಗಳಲ್ಲಿ ಯಾಕೆ ನೇಮಿಸಿಲ್ಲ ಎಂದು ಕೇಳಿದಾಗ, “ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ನೋಡಲ್ ಅಧಿಕಾರಿ ನೇಮಕ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಭಾಗ ಸಂಪೂರ್ಣವಾಗಿ ಕೊಳವೆ ಬಾವಿಗಳ ಮೇಲೆ ಅವಲಂಬಿತವಾಗಿವೆ. ಬೆಂಗಳೂರು ನಗರ ಕಾವೇರಿ ನೀರನ್ನು ಅವಲಂಬಿಸಿದೆ. ಬೆಂಗಳೂರು ಗ್ರಾಮಾಂತರದಿಂದಲೇ ಹೆಚ್ಚು ಟ್ಯಾಂಕರ್ ಮೂಲಕ ನೀರು ಬರುತ್ತಿದೆ” ಎಂದು ತಿಳಿಸಿದರು.
ಸೋಮವಾರ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬಗ್ಗೆ ಕೇಳಿದಾಗ, “ಅವರು ಮಾಡಲಿ” ಎಂದು ತಿಳಿಸಿದರು.
BREAKING: ರಾಮೇಶ್ವರಂ ‘ಕೆಫೆ ಬಾಂಬ್ ಸ್ಪೋಟ’ ಪ್ರಕರಣ: ‘ಬಾಂಬರ್ ಹೊಸ ಪೋಟೋ’ ಬಿಡುಗಡೆ ಮಾಡಿದ ‘NIA’
BREAKING: ರಾಜ್ಯದ ಈ ಪ್ರಸಿದ್ಧ ‘ಶ್ರೀರಾಮಮಂದಿರ’ ಸ್ಪೋಟಿಸೋದಾಗಿ ‘ಅಲ್ಲಾ ಹು ಹೆಸರಿ’ನಲ್ಲಿ ‘ಬಾಂಬ್ ಬೆದರಿಕೆ’ ಪತ್ರ