ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ವಿವಿಧ ಆಯಾಮಗಳಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಮುದ್ರ ಮಾರ್ಗದಲ್ಲಿ ಪಲಾಯಣ ಮಾಡಿರೋ ಶಂಕೆಯಲ್ಲಿ ಕರಾವಳಿ ಕಾವಲುಪಡೆಯಿಂದ ಪರಿಶೀಲನೆ ನಡೆಸುತ್ತಿದ್ದರೇ, ಮತ್ತೊಂದು ಆಯಾಮವಾಗಿ ಈಗ ಬಾಂಬರ್ ಪುಣೆಯಲ್ಲಿರುವ ಶಂಕೆ ವ್ಯಕ್ತವಾಗಿದೆ.
ಮಾ.1ರಂದು ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ 2 ಬಾಂಬ್ ಸ್ಪೋಟಗೊಂಡಿದ್ದವು. ಈ ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದರು. ಈಗಾಗಲೇ ಗಾಯಾಳುಗಳಲ್ಲಿ ಹಲವರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ ಕೆಲವರು ಬ್ರೂಕ್ ಫೀಲ್ಡ್ ಹಾಗೂ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕೇಸ್ ಸಂಬಂಧ ತನಿಖೆಯನ್ನು ಎನ್ಐಎ ಅಧಿಕಾರಿಗಳು ಚುರುಕಾಗಿ ನಡೆಸುತ್ತಿದ್ದಾರೆ. ಈಗಾಗಲೇ ಬಾಂಬರ್ ಎರಡು ಮೂರು ವೀಡಿಯೋಗಳನ್ನು ಬಿಡುಗಡೆ ಮಾಡಲಾಗಿದೆ. ಜೊತೆಗೆ ಇಂದು ಮೂರು ಬಾಂಬರ್ ಕ್ಲಿಯರ್ ಪೋಟೋಗಳನ್ನು ಬಿಡುಗಡೆ ಮಾಡಲಾಗಿತ್ತು. ಆರೋಪಿಯ ಸುಳಿವು ನೀಡಿದವರಿಗೆ 10 ಲಕ್ಷ ನಗದು ಬಹುಮಾನ ಕೂಡ ಘೋಷಣೆ ಮಾಡಲಾಗಿದೆ.
ಇದೀಗ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಬಾಂಬರ್ ಬಾಂಬ್ ಸ್ಪೋಟದ ನಂತ್ರ ತುಮಕೂರು ಮಾರ್ಗವಾಗಿ, ಬಳ್ಳಾರಿ, ಬೀದರ್ ಮೂಲಕ ಪುಣೆಗೆ ತೆರಳಿರೋ ಶಂಕೆಯನ್ನು ಎನ್ಐಎ ಅಧಿಕಾರಿಗಳು ವ್ಯಕ್ತ ಪಡಿಸಿದ್ದಾರೆ. ಈ ಕಾರಣಕ್ಕಾಗೇ ಆ ಮಾರ್ಗದಲ್ಲಿನ ಸಿಸಿಟಿವಿ ವೀಡಿಯೋಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
BREAKING: ರಾಜ್ಯದ ಈ ಪ್ರಸಿದ್ಧ ‘ಶ್ರೀರಾಮಮಂದಿರ’ ಸ್ಪೋಟಿಸೋದಾಗಿ ‘ಅಲ್ಲಾ ಹು ಹೆಸರಿ’ನಲ್ಲಿ ‘ಬಾಂಬ್ ಬೆದರಿಕೆ’ ಪತ್ರ