ದಾವಣಗೆರೆ: ಬೆಳಗಾವಿಯ ನಿಪ್ಪಾಣಿಯಲ್ಲಿರುವಂತ ಶ್ರೀರಾಮಮಂದಿರ ದೇವಾಲಯಕ್ಕೆ ಬಾಂಬ್ ಬೆದರಿಕೆ ಪತ್ರವನ್ನು ಕಳುಹಿಸಲಾಗಿತ್ತು. ಈ ಹಿನ್ನಲ್ಲೆಯಲ್ಲಿ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಹೈ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ಬೆಳಗಾವಿಯ ನಿಪ್ಪಾಣಿಯ ಶ್ರೀರಾಮಮಂದಿರ ದೇವಾಲಯವನ್ನು ಸ್ಪೋಟಿಸೋದಾಗಿ ಬಾಂಬ್ ಬೆದರಿಕೆ ಪತ್ರ ಬಂದಿದೆ. ಹೀಗಾಗಿ ದೇವಾಲಯಗಳಲ್ಲಿ ಭದ್ರತೆಯನ್ನು ಹೆಚ್ಚಿಸೋದಕ್ಕೆ ಸೂಚಿಸಲಾಗಿದೆ ಎಂದರು.
ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳೋದಕ್ಕೆ ಮುಜರಾಯಿ ಇಲಾಖೆಯ ಎಂಡಿಗೆ ಸೂಚಿಸಿದ್ದೇನೆ. ಅವರು ಸೂಕ್ತ ಭದ್ರತೆ ಕುರಿತಂತೆ ಆದೇಶ ಮಾಡಲಿದ್ದಾರೆ ಎಂದು ತಿಳಿಸಿದರು.
ಕರ್ನಾಟಕದಲ್ಲಿ ಕಾಟನ್ ಕ್ಯಾಂಡಿ, ಗೋಬಿ ಮಂಚೂರಿ ಬ್ಯಾನ್: ಮಾ.11ರಂದು ಅಧಿಕೃತ ಘೋಷಣೆ ಸಾಧ್ಯತೆ
BREAKING: ರಾಜ್ಯದ ಈ ಪ್ರಸಿದ್ಧ ‘ಶ್ರೀರಾಮಮಂದಿರ’ ಸ್ಪೋಟಿಸೋದಾಗಿ ‘ಅಲ್ಲಾ ಹು ಹೆಸರಿ’ನಲ್ಲಿ ‘ಬಾಂಬ್ ಬೆದರಿಕೆ’ ಪತ್ರ