ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ಎನ್ನುವಂತೆ, ನಾಳೆ ಬೆಳಿಗ್ಗೆ ಮೆಟ್ರೋ ಸಂಚಾರವು ಬೆಳಿಗ್ಗೆ 7 ಗಂಟೆಯ ಬದಲಾಗಿ 6 ಗಂಟೆಗೆ ಪ್ರಾರಂಭವಾಗಲಿದೆ.
ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರಿನಲ್ಲಿ ದಿನಾಂಕ 10ನೇ ಮಾರ್ಚ್ 2024 (ಭಾನುವಾರ)ದಂದು ಕರ್ನಾಟಕ ಪೊಲೀಸ್ ವತಿಯಿಂದ ಆಯೋಜಿಸಲಾಗಿರುವ ರಾಜ್ಯ ಮಟ್ಟದ 10K/5K ರನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಸುಗಮವಾಗಿ ಭಾಗವಹಿಸಲು ಬಿಎಂಆರ್ಸಿಎಲ್, ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ಎಲ್ಲಾ ನಾಲ್ಕು ಟರ್ಮಿನಲ್ಗಳಿಂದ ದಿನಾಂಕ 10.03.2024 ರಂದು ಬೆಳಿಗ್ಗೆ 07.00ರ ಬದಲಾಗಿ 06.00 ಗಂಟೆಗೆ ಪ್ರಾರಂಭಿಸಲಿದೆ ಎಂದು ತಿಳಿಸಿದೆ.
BREAKING: ರಾಜ್ಯದ ಈ ಪ್ರಸಿದ್ಧ ‘ಶ್ರೀರಾಮಮಂದಿರ’ ಸ್ಪೋಟಿಸೋದಾಗಿ ‘ಅಲ್ಲಾ ಹು ಹೆಸರಿ’ನಲ್ಲಿ ‘ಬಾಂಬ್ ಬೆದರಿಕೆ’ ಪತ್ರ