ಬೆಂಗಳೂರು : ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿ ಗಳಲ್ಲಿ ಕೃತಕ ಬಣ್ಣ ಬೇರಸುವಿಕೆಯಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಬಗ್ಗೆ ವಿಶ್ಲೇಷಣೆಗೊಳಪಡಿಸಲಾಗಿದೆ. ಈ ನಿಟ್ಟಿನಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕುರಿತಂತೆ ಮಾನ್ಯ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಮಹತ್ವದ ಸುದ್ದಿಗೋಷ್ಟಿ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿಕಾಸ ಸೌಧದಲ್ಲಿ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ವಿಭಾಗವು, ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿದೆ. ಇವುಗಳಲ್ಲಿ ಕೃತಕ ಬಣ್ಣಗಳ ಬಳಸಿರುವುದು ಪತ್ತೆಯಾಗಿದೆ. ಆ ಹಿನ್ನೆಲೆಯಲ್ಲಿ, ಇಂದು ಮಹತ್ವದ ನಿರ್ಧಾರ ಹೊರ ಬೀಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿಯಲ್ಲಿ ಕೃತಕ ಬಣ್ಣ ಬೆರಕೆ ಹಿನ್ನೆಲೆ ಈ ಹಿಂದೆ ವಿವಿಧ ಸ್ಯಾಂಪಲ್ ಗಳ ಪರೀಕ್ಷೆಗೆ ನೀಡಲಾಗಿತ್ತು. ಸದ್ಯ ಪರೀಕ್ಷೆಯ ವರದಿ ಬಂದ ಹಿನ್ನೆಲೆ ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುದ್ಧಿಗೋಷ್ಠಿ ನಡೆಸಲು ಮುಂದಾಗಿದ್ದು ರಾಜ್ಯದಲ್ಲಿ ಅಸುರಕ್ಷಿತ ಗೋಬಿ ಹಾಗೂ ಕ್ಯಾಂಡಿ ಕೂಡ ಬ್ಯಾನ್ ಆಗುವ ಸಾಧ್ಯತೆ ಇದೆ.
ಇನ್ನು ಕಾಟನ್ ಕ್ಯಾಂಡಿಯಲ್ಲಿ ಹಾನಿಕಾರಕ ರೋಡಮೈನ್-ಬಿ ಹಾಗೂ ಗೋಬಿ ಮಂಚೂರಿಯಲ್ಲಿ ಸನ್‌ಸೆಟ್ ಯೆಲ್ಲೊ ಬಣ್ಣ ಮತ್ತು ಟಾಟ್ರ್ರಾಜಿನ್ ರಾಸಾಯನಿಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಎರಡೂ ತಿನಿಸುಗಳನ್ನು ನಿಷೇಧಿಸಲು ಮುಂದಾಗಿದೆ. ಆಹಾರ ಮತ್ತು ಸುರಕ್ಷತಾ ಇಲಾಖೆ ವರದಿ ಆಧರಿಸಿ ಆರೋಗ್ಯ ಸಚಿವರು ಇಂದು ರಾಜ್ಯದಲ್ಲಿ ಇವುಗಳ ನಿಷೇಧ ಪ್ರಕಟಿಸುವ ಸಂಭವವಿದೆ.