ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದಾಗಿ ಬರಗಾಲ ಆವರಿಸಿದೆ. ಎಲ್ಲೆಲ್ಲೂ ನೀರು, ಮೇವಿಗೆ ಕೊರತೆ ಎದುರಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಜಾನುವಾರು ಹೊಂದಿರುವಂತ ರೈತರಿಗೆ ಉಚಿತವಾಗಿ ಸರ್ಕಾರದಿಂದಲೇ ಮೇವಿನ ಮಿನಿ ಕಿಟ್ ವಿತರಣೆಗೆ ನಿರ್ಧರಿಸಿದೆ. ಈ ಯೋಜನೆಗಾಗಿ ಅನುದಾನವನ್ನು ಮಂಜೂರು ಮಾಡಿ ಆದೇಶಿಸಿದೆ.
ಈ ಕುರಿತಂತೆ ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ ಮತ್ತು ಸೇವೆಗಳ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿಯವರು, ರಾಜ್ಯದಲ್ಲಿ ಬರ ಘೋಷಣೆಯಾಗಿರುವ ತಾಲ್ಲೂಕುಗಳಲ್ಲಿ ಮೇವಿನ ಕೊರತೆ ನೀಗಿಸುವ ಸಲುವಾಗಿ ರೈತರುಗಳಿಗೆ ಉಚಿತವಾಗಿ ಮಿನಿ ಮೇವಿನ ಕಿಟ್ ಗಳನ್ನು ಹಾಲು ನೀಡುವ ರಾಸುಗಳನ್ನು ಹೊಂದಿರುವ ಹಾಗೂ ನೀರಾವರಿ ಮೂಲವನ್ನು ಹೊಂದಿರುವ ಅರ್ಹ ರೈತರುಗಳಿಗೆ ಆದ್ಯತೆ ಮೇರೆಗೆ ವಿತರಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.
ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಗ್ರಾಮ ಪಂಚಾಯ್ತಿಗಳ ಮೂಲಕ ಹಾಗೂ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಹಾಗೂ ಆಯುಕ್ತರು, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಮೇಲುಸ್ತುವಾರಿಯಲ್ಲಿ ವಿತರಿಸಲು ಮಿನಿ ಮೇಲಿನ ಕಿಟ್ ಗಳ್ನು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳ ಪಾರದರ್ಶಕ ಅಧಿನಿಯಮ 1999 ಕಾಯ್ದೆ ಹಾಗೂ ನಿಯಮಗಳನ್ವಯ ಪಾರದರ್ಶಕವಾಗಿ ಖರೀದಿಸಲು 20 ಕೋಟಿಗಳನ್ನು ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಕೆಲ ಷರತ್ತುಗಳೊಂದಿಗೆ ಆಯುಕ್ತರು, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗೆ ಬಿಡುಗಡೆ ಮಾಡಿದೆ.
‘ಶೃಂಗೇರಿ ಪೋಕ್ಸೋ’ ಕೇಸ್: ತಾಯಿ ಸೇರಿ ‘ನಾಲ್ವರು ಆರೋಪಿ’ಗಳಿಗೆ 25 ಸಾವಿರ ದಂಡ, ’20 ವರ್ಷ’ ಜೈಲು ಶಿಕ್ಷೆ