ಬೆಂಗಳೂರು : ರಾಜ್ಯಕ್ಕೆ ಕೇಂದ್ರ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇಂದು ಎರಡು ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.
ಇಂದು ಬೆಂಗಳೂರು-ಕಲಬುರಗಿ ಹಾಗೂ ಮೈಸೂರು-ಚೆನ್ನೈ ನಡುವೆ ಸಂಚರಿಸಲಿರುವ ಎರಡು ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಅವರು ವಿಡಿಯೋ ಕಾನ್ಫೆರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಒಟ್ಟು ವಂದೇ ಭಾರತ್ ರೈಲುಗಳ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.
ಇನ್ನು ತಿರುವನಂತಪುರಂ-ಕಾಸರಗೋಡು ರೈಲನ್ನು ಮಂಗಳೂರು ಸೆಂಟ್ರಲ್ ವರೆಗೆ ವಿಸ್ತರಿಸಲಾಗಿದ್ದು, ಇದಕ್ಕೂ ಇಂದು ಪ್ರಧಾನಿ ಮೋದಿ ಅವರು ವಿಡಿಯೋ ಕಾನ್ಫೆರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ.