ಬೆಂಗಳೂರು : ಬೆಂಗಳೂರು ಮಹಾನಗರ ಪಾಲಿಕೆ ಏಪ್ರಿಲ್ 1 ರಿಂದ ಹೊಸ ಆಸ್ತಿ ತೆರಿಗೆಯನ್ನು ಜಾರಿಗೆ ತರಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ಎಂಟು ವರ್ಷಗಳ ಬಳಿಕ ಬೆಂಗಳೂರಿನಲಿ ಆಸ್ತಿ ತೆರಿಗೆ ಹೆಚ್ಚಳವಾಗುತ್ತಿದೆ. ಹೊಸ ಆಸ್ತಿ ತೆರಿಗೆ ವ್ಯವಸ್ಥೆಯಡಿ ಎಲ್ಲ ಮಾದರಿಗಳ ಆಸ್ತಿ ತೆರಿಗೆಯನ್ನು ಕನಿಷ್ಠ 5.3 ರಿಂದ ಗರಿಷ್ಠ 8.2ರವರೆಗೆ ಹೆಚ್ಚಳ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
2016 ರಲ್ಲಿ ಕೊನೆಯದಾಗಿ ಆಸ್ತಿ ತೆರಿಗೆಯನ್ನು ಹೆಚ್ಚಳ ಮಾಡಲಾಗಿತ್ತು. ಅದಕ್ಕೆ ಹೋಲಿಸಿದರೆ ಈಗ ತೆರಿಗೆಯಲ್ಲಿ ಶೇ. 6.5 ರಷ್ಟು ಹೆಚ್ಚಳವಾಗಲಿದೆ ಎಂದು ತಿಳಿಸಿದ್ದಾರೆ.