ನವದೆಹಲಿ: 2014 ರ ಡಿಸೆಂಬರ್ 31 ಕ್ಕಿಂತ ಮೊದಲು ಭಾರತಕ್ಕೆ ಬಂದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ದಾಖಲೆರಹಿತ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೀಡಲು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ತರುವುದಾಗಿ ಗೃಹ ಸಚಿವಾಲಯ ಇಂದು ಪ್ರಕಟಿಸಿದೆ.
ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ದಾನಿಶ್ ಕನೇರಿಯಾ, ಪಾಕಿಸ್ತಾನಿ ಹಿಂದೂಗಳು ಈಗ ತೆರೆದ ಗಾಳಿಯಲ್ಲಿ ಉಸಿರಾಡಬಹುದು ಎಂದು ಮೈಕ್ರೋಬ್ಲಾಗಿಂಗ್ ಸೈಟ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅಧಿಸೂಚನೆ ಹೊರಡಿಸಿದ್ದಕ್ಕಾಗಿ ಕನೇರಿಯಾ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.
Thank you @narendramodi ji and @AmitShah ji for notifying Citizenship Amendment Act.
— Danish Kaneria (@DanishKaneria61) March 11, 2024
Pakistani Hindus will now be able to breathe in open air. #CAA
— Danish Kaneria (@DanishKaneria61) March 11, 2024