ನವದೆಹಲಿ: ಅಮೆರಿಕದ ನಟಿ ಮತ್ತು ಗಾಯಕಿ ಮೇರಿ ಮಿಲ್ಬೆನ್ ಸೋಮವಾರ ಭಾರತದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) “ಶಾಂತಿಯ ಮಾರ್ಗ” ಎಂದು ಬಣ್ಣಿಸಿದ್ದಾರೆ.
ಕ್ರಿಶ್ಚಿಯನ್ ಮಹಿಳೆಯಾಗಿ ಮತ್ತು ಧಾರ್ಮಿಕ ಸ್ವಾತಂತ್ರ್ಯದ ಬೆಂಬಲಿಗರಾಗಿ, ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನವನ್ನು ಘೋಷಿಸಿದ್ದಕ್ಕಾಗಿ ನಾನು ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರವನ್ನು ಶ್ಲಾಘಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಈ ಕಾನೂನಿನ ಅಡಿಯಲ್ಲಿ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಈಗ ಭಾರತದ ಪೌರತ್ವ ನೀಡಲಾಗುವುದು. “ಧಾರ್ಮಿಕ ಸ್ವಾತಂತ್ರ್ಯವನ್ನು ಎತ್ತಿಹಿಡಿದಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ಭಾರತ ಸರ್ಕಾರಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.
On CAA notification, African-American actress and singer Mary Millben tweets, "This is a pathway towards peace. This is a true act of democracy. As a Christian, woman of faith, and global advocate for religious freedom, I applaud the Modi-led government announcing today the… pic.twitter.com/Yjw81BPuag
— ANI (@ANI) March 11, 2024
ಮಾಲೆಗಾಂವ್ ಸ್ಫೋಟ ಪ್ರಕರಣ: ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ