ಬೆಂಗಳೂರು: ನಕಲಿ ಸುದ್ದಿಗಳನ್ನು ಹರಡುವುದು ಮತ್ತು ಮಾರ್ಫಿಂಗ್ ಮಾಡಿದ ಚಿತ್ರಗಳು ಮತ್ತು ವೀಡಿಯೊಗಳನ್ನು ಹಂಚಿಕೊಳ್ಳುವುದು ಮುಂತಾದ ಸೈಬರ್ ಅಪರಾಧಗಳ ವಿರುದ್ಧ ಹೇಗೆ ಕಾರ್ಯನಿರ್ವಹಿಸಬೇಕು ಎಂಬುದರ ಕುರಿತು ಚೌಕಟ್ಟನ್ನು ರೂಪಿಸಲು ಸೋಮವಾರ ವಿಧಾನಸೌಧದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.
ಕೊಟ್ಟ ಮಾತಿನಂತೆ ನಡೆದುಕೊಳ್ಳುವವರನ್ನು ಬೆಂಬಲಿಸಿದರೆ ರಾಜ್ಯದ ಅಭಿವೃದ್ಧಿ- CM ಸಿದ್ದರಾಮಯ್ಯ
ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ವಿವಿಧ ಸೈಬರ್ ಅಪರಾಧಗಳನ್ನು ಎದುರಿಸುವ ಮಾರ್ಗಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. “ಬಹು ಸಮನ್ವಯ ಸಮಿತಿಯನ್ನು ರಚಿಸಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿ ಅದರ ನೇತೃತ್ವ ವಹಿಸಲಿದ್ದಾರೆ. ನೋಡಲ್ ಅಧಿಕಾರಿಯನ್ನು ಸಹ ನೇಮಿಸಲಾಗುವುದು ಮತ್ತು ಹೆಚ್ಚಿನ ಜವಾಬ್ದಾರಿಗಳನ್ನು ನೀಡಲಾಗುವುದು. ಸೈಬರ್ ಅಪರಾಧಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಡಿಜಿ ಮತ್ತು ಐಜಿಪಿ ಮೂಲಕ ಸರ್ಕಾರಕ್ಕೆ ನೀಡಲಿದ್ದಾರೆ” ಎಂದು ಅವರು ಹೇಳಿದರು.
ಸೈಬರ್ ಅಪರಾಧಗಳ ವಿರುದ್ಧ ಕ್ರಮ ತೆಗೆದುಕೊಳ್ಳುವ ಪ್ರಕ್ರಿಯೆಯ ಬಗ್ಗೆ ಸಭೆಯಲ್ಲಿ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (ಎಸ್ಒಪಿ) ಅನ್ನು ರೂಪಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಸೈಬರ್ ಅಪರಾಧಗಳನ್ನು ಗುರುತಿಸುವಾಗ, ಪರಿಶೀಲಿಸುವಾಗ ಮತ್ತು ಕ್ರಮ ತೆಗೆದುಕೊಳ್ಳುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಆ ಪ್ರಕ್ರಿಯೆಗೆ ಅಗತ್ಯವಾದ ತಂತ್ರಜ್ಞಾನದ ಬಗ್ಗೆಯೂ ಚರ್ಚಿಸಲಾಯಿತು’ ಎಂದು ಮೂಲಗಳು ತಿಳಿಸಿವೆ