ಮಂಡ್ಯ : ಈ ಬಾರಿಯ ಲೋಕಸಭೆ ಚುನಾವಣೆ ಮತ್ತಷ್ಟು ರಂಗೇರಲಿದ್ದು, ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಪರವಾಗಿ ದರ್ಶನ್, ಯಶ್ ಸೇರಿ ನಾಲ್ವರು ಸ್ಟಾರ್ ನಟರು ಪ್ರಚಾರ ನಡೆಸಲಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅಭಿಷೇಕ್ ಅಂಬರೀಶ್, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ತಾಯಿ ಸುಮಲತಾ ಸ್ಪರ್ಧಿಸುತ್ತಿದ್ದು, ಈ ಬಾರಿಯೂ ತಮ್ಮ ತಾಯಿಯನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿಯೂ ದರ್ಶನ್, ಯಶ್ ಪ್ರಚಾರ ಮಾಡಲಿದ್ದು, ದರ್ಶನ್, ಯಶ್ ಜೊತೆಗೆ ಇನ್ನೂ ನಾಲ್ವರು ಸ್ಟಾರ್ ನಟರು ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಅಂಬರೀಶ್ ಅಭಿಮಾನಿಗಳು ಒಗ್ಗಟ್ಟಾಗಿ ತಾಯಿ ಸುಮಲತಾ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.