ಬೆಂಗಳೂರು: ಸೈಬರ್ ಅಪರಾಧ ಪ್ರಕರಣಗಳ ವಿರುದ್ಧ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ಸ್ಪಷ್ಟವಾದ ಆದೇಶವನ್ನು ಎರಡು ದಿನದಲ್ಲಿ ಹೊರಡಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಹೇಳಿದ್ದಾರೆ.
BIG NEWS : ದೇಶಾದ್ಯಂತ 75 ದಿನಗಳಲ್ಲಿ 11 ಲಕ್ಷ ಕೋಟಿ ರೂ.ಗಳ ಯೋಜನೆಗಳನ್ನು ಉದ್ಘಾಟನೆ : ಪ್ರಧಾನಿ ಮೋದಿ| PM Modi
ಅವರು ಸೋಮವಾರ ವಿಧಾನಸೌಧದಲ್ಲಿ ಸೈಬರ್ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆ ಬಳಿಕ ಜತೆ ಮಾತನಾಡಿದ ಅವರು, ಸುಳ್ಳು ಸುದ್ದಿ ಹರಡುವುದು, ಫೋಟೋ ಮತ್ತು ವಿಡಿಯೋಗಳನ್ನು ತಿರುಚಿ ಬಿತ್ತರಿಸುವುದು ಸೇರಿದಂತೆ ವಿವಿಧ ರೀತಿಯ ಸೈಬರ್ ಅಪರಾಧ ತಡೆಗೆ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಕುರಿತು ಸಭೆ ನಡೆಸಲಾಗಿದೆ ಅಂತ ತಿಳಿಸಿದರು .
ದ್ವಿತೀಯ ಪಿಯುಸಿ ಭೌತಶಾಸ್ತ್ರ ಪರೀಕ್ಷೆಗೆ ಕೃಪಾಂಕ: ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ!
ಇನ್ನೂಇದೇ ವೇಳೆ ಅವರು ಮಾತನಾಡಿ, ಮಲ್ಟಿ ಡಿಪಾರ್ಟ್ಮೆಂಟ್ ಕೋರ್ಡಿನೇಷನ್ ಕಮಿಟಿಯನ್ನು ರಚಿಸಲಾಗಿದೆ. ಇದಕ್ಕೆ ಹಿರಿಯ ಪೊಲೀಸ್ ಅಧಿಕಾರಿ ಮುಖ್ಯಸ್ಥರಾಗಿರುತ್ತಾರೆ. ನೋಡಲ್ ಅಧಿಕಾರಿಯನ್ನು ನೇಮಿಸಲಾಗುತ್ತದೆ. ನೋಡಲ್ ಅಧಿಕಾರಿಗೆ ಹೆಚ್ಚಿನ ಜವಾಬ್ಧಾರಿಯನ್ನು ವಹಿಸಲಾಗುತ್ತಿದೆ. ಡಿಜಿ ಮತ್ತು ಐಜಿಪಿ ಮೂಲಕ ಸರಕಾರಕ್ಕೆ ಮಾಹಿತಿ ಕೊಡುತ್ತಾರೆ ಅಂತ ತಿಳಿಸಿದರು.