ನವದೆಹಲಿ: ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್ಲೋಡ್ ಮಾಡುವುದು ಮತ್ತು ವೀಕ್ಷಿಸುವುದು ಅಪರಾಧವಲ್ಲ ಎಂಬ ಮದ್ರಾಸ್ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಬುಧವಾರ “ದುರುದ್ದೇಶಪೂರಿತ” ಎಂದು ಕರೆದಿದೆ.
ಚೆನ್ನೈ ನಿವಾಸಿ ಎಸ್.ಹರೀಶ್ (28) ಎಂಬಾತನನ್ನು ತನ್ನ ಸೆಲ್ ಫೋನ್ನಲ್ಲಿ ಮಕ್ಕಳನ್ನು ಒಳಗೊಂಡ ಅಶ್ಲೀಲ ವಿಷಯವನ್ನು ಡೌನ್ಲೋಡ್ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಹರೀಶ್ ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದ್ದರು.
ಜನವರಿ 11 ರಂದು ಏಕಸದಸ್ಯ ಪೀಠವು ಮಕ್ಕಳ ಅಶ್ಲೀಲ ವಿಷಯವನ್ನು ಡೌನ್ಲೋಡ್ ಮಾಡುವುದು ಮತ್ತು ನೋಡುವುದು ಪೋಕ್ಸೊ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಅಪರಾಧವಲ್ಲ ಎಂದು ತೀರ್ಪು ನೀಡಿತ್ತು.
ಫರಿದಾಬಾದ್ ಮೂಲದ ಜಸ್ಟ್ ರೈಟ್ಸ್ ಫಾರ್ ಚಿಲ್ಡ್ರನ್ಸ್ ಅಲೈಯನ್ಸ್ ಮತ್ತು ದೆಹಲಿ ಮೂಲದ ಎನ್ಜಿಒ ಬಚ್ಪನ್ ಬಚಾವೋ ಆಂದೋಲನ್ ಈ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿದ್ದವು. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ ಸೋಮವಾರ ಅರ್ಜಿಯ ವಿಚಾರಣೆ ನಡೆಸಿತು. ಹೈಕೋರ್ಟ್ನ ತೀರ್ಪು ಕಾನೂನುಗಳಿಗೆ ವಿರುದ್ಧವಾಗಿದೆ ಮತ್ತು ಕ್ರೂರವಾಗಿದೆ. ಇಂತಹ ತೀರ್ಪನ್ನು ಹೇಗೆ ನೀಡಲು ಸಾಧ್ಯ ಎಂದು ಏಕಸದಸ್ಯ ಪೀಠ ಪ್ರಶ್ನಿಸಿದೆ.