ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ಸುವರ್ಣ ಸಂಭ್ರಮದ ಸ್ಮರಣಾರ್ಥ ‘ಹೆಸರಾಯಿತು ಕರ್ನಾಟಕ – ಉಸಿರಾಗಲಿ ಕನ್ನಡ’ ಅಭಿಯಾನದ ಅಂಚೆ ಲಕೋಟೆ ಬಿಡುಗಡೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ವಿಧಾನಪರಿಷತ್ ಸದಸ್ಯ ನಾಗರಾಜ್ ಯಾದವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅಜಯ್ ನಾಗಭೂಷಣ್, ನಿರ್ದೇಶಕರಾದ ಡಾ.ಧರಣಿದೇವಿ ಮಾಲಗತ್ತಿ, ಕರ್ನಾಟಕ ವೃತ್ತ ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ರಾಜೇಂದ್ರ ಹಾಗೂ ಇನ್ನಿತರರು ಉಪಸ್ಥಿತರಿದ್ದರು.