ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ದಿ:01-01-2024ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡುವ ಕುರಿತಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿದೆ.
ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ದಿನಾಂಕದಿಂದಲೇ ಪೂರ್ವಾನ್ವಯವಾಗಿ ಕರ್ನಾಟಕ ರಾಜ್ಯ ಸರ್ಕಾರವೂ ಸಹ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಈ ಹಿಂದಿನಿಂದಲೂ ಮಂಜೂರು ಮಾಡಿರುತ್ತದೆ ಹಾಗೂ ಉಲ್ಲೇಖದ ಆದೇಶದಂತೆ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ದಿನಾಂಕ: 01-01-2024ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇ.4% ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿರುತ್ತದೆ.
ಅದರಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ದಿನಾಂಕ: 01-01-2024 ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇ.4%ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಲು ಕೋರಲಾಗಿದೆ.