ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯ (Citizenship Amendment Act -CAA) ನಿಯಮಗಳನ್ನು ಅಧಿಸೂಚನೆ ಮಾಡಿದ ಒಂದು ದಿನದ ನಂತರ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ( Tamil Nadu Chief Minister MK Stalin ) ಮಂಗಳವಾರ ಸಿಎಎಯನ್ನು ರಾಜ್ಯದಲ್ಲಿ ಜಾರಿಗೆ ತರುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ.
ದೇಶಾದ್ಯಂತ ಭಾರಿ ಪ್ರತಿಭಟನೆಗಳ ನಡುವೆ, ಸಿಎಎಯನ್ನು 2019 ರಲ್ಲಿ ಸಂಸತ್ತು ಅಂಗೀಕರಿಸಿತು. ಈ ಕಾಯ್ದೆಯು ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದು 2014 ಕ್ಕಿಂತ ಮೊದಲು ಭಾರತಕ್ಕೆ ಬಂದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ಪ್ರಕ್ರಿಯೆಯನ್ನು ತ್ವರಿತಗೊಳಿಸುತ್ತದೆ.
ಸಿಎಎ ಕಾಯ್ದೆಯು ಹಲವಾರು ವಿಳಂಬಗಳನ್ನು ಮತ್ತು ವಿರೋಧ ಪಕ್ಷಗಳಿಂದ ನಿರಂತರ ಟೀಕೆಗಳನ್ನು ಎದುರಿಸಿದೆ. ಈ ಬೆನ್ನಲ್ಲೇ ತಮಿಳುನಾಡಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವುದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸ್ಟಾಲಿನ್ ಘೋಷಣೆ ಮಾಡಿದ್ದಾರೆ. ಈ ಮೂಲಕ ದೇಶದಲ್ಲಿ ಸಿಎಎ ವಿರೋಧಿಸಿದ ಬಂಡಾಯ ಹೊರ ಬಿದ್ದಂತೆ ಆಗಿದೆ.
ಎಲೆಕ್ಟ್ರಿಕ್ ಕಾರು ಉಡುಗೊರೆ: ಆನಂದ್ ಮಹೀಂದ್ರಾಗೆ ಧನ್ಯವಾದ ಅರ್ಪಿಸಿದ ಚೆಸ್ ತಾರೆ ಆರ್ ಪ್ರಗ್ನಾನಂದ
ʻಭಾರತೀಯ ಪೌರತ್ವʼಕ್ಕಾಗಿ ಅರ್ಜಿ ಸಲ್ಲಿಸಲು ಈ ವೆಬ್ ಸೈಟ್ ಗೆ ಭೇಟಿ ನೀಡಿ | Indian citizenship