ಬೆಂಗಳೂರು: ಮಾರ್ಚ್ 13 ರಿಂದ 16 ರವರೆಗೆ ಮುರುಡೇಶ್ವರ ನಿಲ್ದಾಣದಲ್ಲಿ ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಸಲುವಾಗಿ ಈ ಕೆಳಗಿನ ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗುತ್ತಿದೆ ಎಂದು ಕೊಂಕಣ ರೈಲ್ವೆಯು ಸೂಚಿಸಿದೆ.
1. ಮಾರ್ಚ್ 12, 13, 14 & 15, 2024 ರಂದು ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 16585 ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಮುರುಡೇಶ್ವರ ಎಕ್ಸ್ ಪ್ರೆಸ್ ರೈಲು ಭಟ್ಕಳ ನಿಲ್ದಾಣದವರೆಗೆ ಮಾತ್ರ ಸಂಚರಿಸಲಿದೆ. ಭಟ್ಕಳ ಮತ್ತು ಮುರುಡೇಶ್ವರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ.
2. ಮಾರ್ಚ್ 13, 14, 15 & 16, 2024 ರಂದು ರೈಲು ಸಂಖ್ಯೆ 16586 ಮುರುಡೇಶ್ವರ-ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್ ಪ್ರೆಸ್ ರೈಲು ಭಟ್ಕಳ ನಿಲ್ದಾಣದಿಂದ ತನ್ನ ನಿಗದಿತ ಸಮಯಕ್ಕೆ ಪ್ರಾರಂಭವಾಗಲಿದೆ. ಮುರುಡೇಶ್ವರ ಮತ್ತು ಭಟ್ಕಳ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ.
ಉದ್ಯೋಗ ವಾರ್ತೆ: ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ
‘ನಮ್ಮ ಮೆಟ್ರೋ’ದಲ್ಲಿ ಬೆಚ್ಚಿ ಬೀಳಿಸೋ ಘಟನೆ: ‘ಅಪರಿಚಿತ ವ್ಯಕ್ತಿ’ ಓಡಾಟ, ಕೆಲಕಾಲ ‘ಸಂಚಾರ ಸ್ಥಗಿತ’