ಬೆಂಗಳೂರು: ರಾಜ್ಯದ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ಕುರಿತಂತೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ 5, 8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು,ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಾಂಕನ ನಡೆಸುವ ಸಂಬಂಧ ಘನ ಉಚ್ಚ ನ್ಯಾಯಾಲಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ದಿ:6-10-2023 ಮತ್ತು 9-10-2023ರ ಅಧಿಸೂಚನೆಗಳನ್ನು ಏಕ ಸದಸ್ಯ ಪೀಠದಲ್ಲಿ ರದ್ದು(Quash) ಮಾಡಲಾಗಿರುತ್ತದೆ ಎಂದು ಹೇಳಿದ್ದಾರೆ.
ಸದರಿ ತೀರ್ಪಿನ ವಿರುದ್ಧ ಸರ್ಕಾರವು ದಿನಾಂಕ: 7-3-2024 ರಂದು ಘನ ಉಚ್ಚನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಘನ ಉಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠವು ಪ್ರಕರಣವನ್ನು ಆಲಿಸಿ ಸದರಿ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಂಕನ ಕಾರ್ಯವನ್ನು ಮುಂದುವರೆಸಲು ಮಧ್ಯಂತರ ತೀರ್ಪು ನೀಡಲಾಗಿರುತ್ತದೆ. ಅದರಂತೆ ದಿನಾಂಕ: 11-03-2024ರಿಂದ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಂಕನ ಕಾರ್ಯವನ್ನು ಪ್ರಾರಂಭಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.
ತದನಂತರ ರಾಜ್ಯ ಘನ ಉಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠದ ಮಧ್ಯಂತರ ತೀರ್ಪನ್ನು ಪ್ರಶ್ನಿಸಿ, ಮಾನ್ಯ ಸರ್ವೋಚ್ಛ ನ್ಯಾಯಾಲಯದಲ್ಲಿ ಎಸ್.ಎಲ್.ಪಿ ಸಂಖ್ಯೆ: 6256/2024, ಎಸ್.ಎಲ್.ಪಿ ಸಂಖ್ಯೆ: 6257/2024 ಮತ್ತು ಡೈರಿ ಸಂಖ್ಯೆ: 11192/2024 ದಾವೆಗಳನ್ನು ಹೂಡಿದ್ದು, ಸದರಿ ದಾವೆಗಳನ್ನು ವಿಚಾರಣೆ ನಡೆಸಿದ್ದು, ಈ ದಿನದ ಆದೇಶದಲ್ಲಿ ಸದರಿ ಮಧ್ಯಂತರ ತೀರ್ಪನ್ನು ರದ್ದುಪಡಿಸಿರುತ್ತದೆ ಮತ್ತು ಪ್ರಕರಣವನ್ನು ವಿಭಾಗೀಯ ಪೀಠಕ್ಕೆ ರವಾನಿಸಿರುತ್ತದೆ. ಈ ಹಿನ್ನೆಲೆಯಲ್ಲಿ ದಿನಾಂಕ: 13-3-2024ರಿಂದ ನಡೆಯಬೇಕಾಗಿದ್ದ 5, 8 ಮತ್ತು 9ನೇ ತರಗತಿಗಳ SA-2 ಮೌಲ್ಯಾಂಕನವನ್ನು ಮುಂದಿನ ಆದೇಶದವರೆಗೆ ಮುಂದೂಡುವಂತೆ ಶಾಲೆಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ
‘ರೈಲ್ವೆ ಪ್ರಯಾಣಿಕ’ರೇ ಗಮನಿಸಿ: ನಾಳೆಯಿಂದ ಮಾ.16ರವರೆಗೆ ಈ ರೈಲುಗಳ ‘ಸಂಚಾರ ರದ್ದು’
‘ನಮ್ಮ ಮೆಟ್ರೋ’ದಲ್ಲಿ ಬೆಚ್ಚಿ ಬೀಳಿಸೋ ಘಟನೆ: ‘ಅಪರಿಚಿತ ವ್ಯಕ್ತಿ’ ಓಡಾಟ, ಕೆಲಕಾಲ ‘ಸಂಚಾರ ಸ್ಥಗಿತ’
BREAKING : ರಾಜಸ್ಥಾನದಲ್ಲಿ ವಾಯುಪಡೆಯ ‘ತೇಜಸ್ ವಿಮಾನ’ ಪತನ, ‘ಪೈಲಟ್’ ಸುರಕ್ಷಿತ