ನವದೆಹಲಿ : ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್ (JKNF)ನ್ನ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ‘ಕಾನೂನುಬಾಹಿರ ಸಂಘಟನೆ’ ಎಂದು ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅಮಿತ್ ಶಾ, “ಮೋದಿ ಸರ್ಕಾರ ಇಂದು ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಫ್ರಂಟ್’ನ್ನ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿದೆ” ಎಂದು ಬರೆದಿದ್ದಾರೆ.
The Modi government today declared Jammu and Kashmir National Front as an Unlawful Association.
The outfit was found carrying out secessionist activities to sever Jammu and Kashmir from Bharat and supporting terrorism, challenging the sovereignty, security, and integrity of the…
— Amit Shah (Modi Ka Parivar) (@AmitShah) March 12, 2024
“ಜಮ್ಮು ಮತ್ತು ಕಾಶ್ಮೀರವನ್ನ ಭಾರತದಿಂದ ಬೇರ್ಪಡಿಸಲು ಮತ್ತು ಭಯೋತ್ಪಾದನೆಯನ್ನು ಬೆಂಬಲಿಸಲು, ರಾಷ್ಟ್ರದ ಸಾರ್ವಭೌಮತ್ವ, ಭದ್ರತೆ ಮತ್ತು ಸಮಗ್ರತೆಗೆ ಸವಾಲು ಹಾಕಲು ಈ ಸಂಘಟನೆ ಪ್ರತ್ಯೇಕತಾವಾದಿ ಚಟುವಟಿಕೆಗಳನ್ನ ನಡೆಸುತ್ತಿರುವುದು ಕಂಡುಬಂದಿದೆ. ಭಾರತದ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಭಯೋತ್ಪಾದಕ ಶಕ್ತಿಗಳನ್ನು ಬೇರುಸಹಿತ ಕಿತ್ತೊಗೆಯಲು ನಾವು ಬದ್ಧರಾಗಿದ್ದೇವೆ” ಎಂದು ಅವರು ಹೇಳಿದರು.
ಮುಂದಿನ ಚುನಾವಣೆಯಲ್ಲಿ ‘ಬಿಜೆಪಿ’ ಮತ್ತೆ ಅಧಿಕಾರಕ್ಕೆ ಮರಳುತ್ತಾ.? ಜ್ಯೋತಿಷ್ಯವಾಣಿ ಹೇಳೋದೇನು ಗೊತ್ತಾ?