ಬೆಂಗಳೂರು : ರಾಜ್ಯ ಸರ್ಕಾರವು ಸರಳ ವಿವಾಹವಾಗುವ ದಂಪತಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮದುವೆಯಾಗುವ ಪರಿಶಿಷ್ಟ ಜಾತಿಯ ದಂಪತಿಗಳಿಗೆ 50,000 ರೂ. ಪ್ರೋತ್ಸಾಹಧನ ನೀಡಲಾಗುತ್ತಿದೆ.
ನೋಂದಾಯಿತ ಸಂಘ-ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು ವ್ಯವಸ್ಥೆ ಮಾಡುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಿವಾಹವಾಗುವ ಪರಿಶಿಷ್ಟ ಜಾತಿಯ ದಂಪತಿಗಳಿಗೆ ʼಸರಳ ವಿವಾಹ ಪ್ರೋತ್ಸಾಹಧನʼ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುತ್ತದೆ. ಅರ್ಹ ದಂಪತಿಗಳು ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ : https://swdservices.karnataka.gov.in/swincentive/HAhome.aspx
ಸರಳವಾಗಿ ವಿವಾಹವಾದ ದಂಪತಿಗಳಿಗೆ ರೂ. 50,000/- ಸಾವಿರ ಪ್ರೋತ್ಸಾಹಧನ, ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಏರ್ಪಡಿಸುವ ಆಯೋಜಕರುಗಳಿಗೆ ಪ್ರೋತ್ಸಾಹಧನ ಹಾಗೂ ವಿವಾಹದ ಖರ್ಚು-ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ. 2,000/- ಸಾವಿರಗಳನ್ನು ನೀಡಲಾಗುವುದು.
ಸರಳ ವಿವಾಹ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು
ನೋಂದಾಯಿತ ಸಂಘ-ಸಂಸ್ಥೆ, ಧಾರ್ಮಿಕ ಸಂಸ್ಥೆಗಳು ಆಯೋಜಿಸುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ದಂಪತಿಗಳು ವಿವಾಹವಾಗಿರಬೇಕು
ಇಂತಹ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಕನಿಷ್ಠ 10 ಜೋಡಿಗಳು ವಿವಾಹವಾಗಿರತಕ್ಕದ್ದು
ಸರಳ ವಿವಾಹವಾಗುವ ದಂಪತಿಗಳಲ್ಲಿ ಯುವಕನ ವಯಸ್ಸು 21 ರಿಂದ 45 ವರ್ಷ, ಯುವತಿಯ ವಯಸ್ಸು 18 ರಿಂದ 42 ವರ್ಷ
ಸಾಮೂಹಿಕ ವಿವಾಹವಾದ 1 ವರ್ಷದೊಳಗೆ ಅರ್ಜಿ ಸಲ್ಲಿಸತಕ್ಕದ್ದು
ಅಂತರ್ ಜಾತಿ ಪ್ರೋತ್ಸಾಹಧನ ಪಡೆದವರು ಈ ಯೋಜನೆಗೆ ಅರ್ಹರಲ್ಲ