ಚಾಮರಾಜನಗರ : ನಾನು ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಕುರ್ಚಿ ಗಟ್ಟಿ ಆಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಚಾಮರಾಜನಗರದಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಚಾಮರಾಜನಗರಕ್ಕೆ ಹೋದರೆ ಅಧಿಕಾರ ಹೋಗುತ್ತದೆ ಎನ್ನುವ ಮೂಢನಂಬಿಕೆ ಜಿಲ್ಲೆಯ ಜನರಿಗೆ ಮಾಡುವ ಅವಮಾನ. ನಾನು ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಕುರ್ಚಿ ಗಟ್ಟಿ ಆಗುತ್ತಿದೆ ಎಂದು ಹೇಳಿದ್ದಾರೆ.
ನಾನು ಈ ಹಿಂದೆ 12 ಬಾರಿ ಚಾಮರಾಜನಗರಕ್ಕೆ ಭೇಟಿ ಕೊಟ್ಟಿದ್ದೆ. ಈ ಭಾರಿ ಸರ್ಕಾರ ರಚನೆಯಾದ ಬಳಿಕ ಎರಡನೇ ಭಾರಿ ಬಂದಿದ್ದೇನೆ. ಇಲ್ಲಿಗೆ ಬಂದಷ್ಟು ನನ್ನ ಖುರ್ಚಿ ಭದ್ರವಾಗುತ್ತೆ ಎಂದರು.