ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲಿ ಬಾಂಬ್ ಸ್ಪೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ ಅಧಿಕಾರಿಗಳು ಇದೀಗ ಓರ್ವನನ್ನು ವಶಕ್ಕೆ ಪಡೆದಿದ್ದಾರೆ.
ಕೆಫೆಯಲ್ಲಿ ಬಾಂಬ್ ಸ್ಪೋಟದ ಪ್ರಕರಣ ಸಂಬಂಧ ಬಳ್ಳಾರಿಯಲ್ಲಿ ಇಂದು ನಸುಕಿನ ಜಾವ ಶಬ್ಬೀರ್ ನನ್ನು ಎನ್ ಐಎ ತಂಡ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ.
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟದ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ ಅಧಿಕಾರಿಗಳು ಬಾಂಬರ್ ಬಂಧನಕ್ಕೆ ಸಾಕಷ್ಟು ಶೋಧ ಕಾರ್ಯ ನಡೆಸುತ್ತಿದ್ದು, ಈ ನಡುವೆ ಬಳ್ಳಾರಿ ಮೂಲದ ಶಬ್ಬೀರ್ ನನ್ನು ವಶಕ್ಕೆ ಪಡೆದುಕೊಂಡಿದೆ. ಸದ್ಯ ಶಬ್ಬೀರ್ ನನ್ನು ವಶಕ್ಕೆ ಪಡೆದ ಎನ್ ಐಎ ಅಧಿಕಾರಿಗಳು ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗುತ್ತಿದೆ.