ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಹಾಗೂ ಹಾಲಿ ಬಿಜೆಪಿ ಸಂಸದ ಡಿ.ವಿ. ಸದಾನಂದ ಗೌಡ ಅವರಿಗೆ ಟಿಕಟ್ ಮಿಸ್ ಆಗಿದೆ. ಅವರು ಈ ಬಾರಿ ಬೆಂಗಳೂರು ಉತ್ತರದಿಂದ ಕಣಕ್ಕೆ ಇಳಿಯಲು ಬೇರೆಯವರನ್ನು ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ. ಇವರ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಬಹುದು ಎನ್ನಲಾಗಿದೆ. ಈಗಾಗಲೇ ಡಿ.ವಿ. ಸದಾನಂದ ಗೌಡ ಅವರಿಗೆ ಕಾಲ್ ಮಾಡಿ ಹೈಕಮಾಂಡ್ ಮಾಹಿತಿ ನೀಡಿದೆ ಎನ್ನಲಾಗಿದೆ. ಈ ನಡುವೆ ಈ ಬಗ್ಗೆ ಅವರು ಟ್ವಿಟರ್ನಲ್ಲಿ ಮಾಹಿತಿಯನ್ನು ನೀಡಿದ್ದಾರೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನನ್ನೆಲ್ಲಾ ಪ್ರೀತಿಯ ಬಂಧುಗಳೇ,
ನನಗೆ ಕಳೆದ ಹತ್ತು ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ, ನಿಮ್ಮ ಕೆಲಸ ಮಾಡುವ ಅವಕಾಶವನ್ನು ಮಾಡಿಕೊಟ್ಟು ಆಶೀರ್ವಾದವನ್ನು ಮಾಡಿದ್ದೀರಿ. ನಾನು ನನ್ನ ಶಕ್ತಿಮೀರಿ ನಿಮ್ಮ ಸೇವೆಯನ್ನು ಮಾಡುವ ಪ್ರಯತ್ನವನ್ನು ಮಾಡಿದ್ದೇನೆ. ನಿಮ್ಮ ಆಶೀರ್ವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನ ಮಂತ್ರಿ
ಶ್ರೀ ನರೇಂದ್ರ ಮೋದಿ ಅವರ ಜೊತೆಯಲ್ಲಿ 7 ವರ್ಷಗಳ ಕಾಲ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಕೂಡ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ನಿಮ್ಮ ಜೊತೆಗೆ ಇನ್ನು ಮುಂದೆಯೂ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು .
ಇಂತಿ ನಿಮ್ಮವನೇ ಆದ
ಡಿ.ವಿ. ಸದಾನಂದ ಗೌಡ
— Sadananda Gowda ( Modi Ka Parivar ) (@DVSadanandGowda) March 13, 2024