ದಾವಣಗೆರೆ: ದಾವಣಗೆರೆ ಜಿಲ್ಲೆಯ ಎಲ್ಲಾ ವೃತ್ತಿಪರ ಮೀನುಗಾರರಿಗೆ ಪ್ರಸಕ್ತ ಸಾಲಿನ ಮತ್ಸ್ಯವಾಹಿನಿ ಯೋಜನೆಯಡಿ ತ್ರಿ-ಚಕ್ರವಾಹನಗಳನ್ನು ಪರವಾನಿಗೆ ಆಧಾರದಲ್ಲಿ ನೀಡಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ಥಳೀಯವಾಗಿ ಮೀನು ಸೇವನೆಯನ್ನು ಪೆÇ್ರೀತ್ಸಾಹಿಸಲು ಹಾಗೂ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ ದಾವಣಗೆರೆ ಜಿಲ್ಲೆಗೆ ಒಟ್ಟು 4 ಭೌತಿಕ ಗುರಿಗಳಿದ್ದು, ಆಯ್ಕೆಯಾಗುವ ಅರ್ಜಿದಾರರು ಇಲಾಖೆಗೆ ಭದ್ರತಾ ಠೇವಣಿ ಸಾಮಾನ್ಯ ವರ್ಗದವರಿಗೆ ರೂ.1 ಲಕ್ಷ, ಪ.ಜಾತಿ, ಪ.ಪಂಗಡ, ಮಹಿಳೆಯರು ರೂ.50 ಸಾವಿರ ನೀಡಬೇಕಿರುತ್ತದೆ. ಜೊತೆಗೆ ಮಾಸಿಕ ರೂ.3,000 ಬಾಡಿಗೆ ಪಾವತಿಸಬೇಕಿರುತ್ತದೆ. ಅರ್ಜಿ ಸಲ್ಲಿಸಲು ಮಾರ್ಚ್ 25 ಕೊನೆಯ ದಿನವಾಗಿರುತ್ತದೆ.
ಆಸಕ್ತ ಮೀನುಗಾರರು, ಮೀನು ಕೃಷಿಕರು ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು, ದಾವಣಗೆರೆ, ಚನ್ನಗಿರಿ, ಹರಿಹರ, ಹೊನ್ನಾಳಿ ಕಚೇರಿಗಳಿಗೆ ಸಂಪರ್ಕಿಸಿ ಅರ್ಜಿಗಳನ್ನು ಸಲ್ಲಿಸಬಹುದೆಂದು ಮೀನುಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.