ಬೆಂಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ನಿರ್ಣಾಯಕ ಹಂತದ ಪರೀಕ್ಷೆಯಾಗಿರುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಮಕ್ಕಳು ಗಳಿಸಬೇಕೆಂದು ಪೆÇೀಷಕರ ಅಭಿಲಾμÉಯಾಗಿರುತ್ತದೆ. ವಿದ್ಯಾರ್ಥಿಗಳ ಸಾಮಥ್ರ್ಯ, ಬುದ್ಧಿಶಕ್ತಿ, ಆಸಕ್ತಿ, ಕ್ರಿಯಾಶೀಲತೆ, ಕಠಿಣ ಪರಿಶ್ರಮ ಇವುಗಳನ್ನು ಗಣನೆಗೆ ತೆಗೆದುಕೊಳ್ಳದೆ ಹೆಚ್ಚು ಅಂಕಗಳನ್ನು ಗಳಿಸಿ ಎಂದು ಅವರ ಮೇಲೆ ಒತ್ತಡವನ್ನು ಪೆÇೀಷಕರು / ಶಿಕ್ಷಕರು ಹಾಕುತ್ತಿರುವುದು ಇತ್ತೀಚಿನ ಸಮಸ್ಯೆಯಾಗಿದೆ. ಇದರಿಂದ ವಿದ್ಯಾರ್ಥಿಗಳು ಅಧ್ಯಯನದ ಕಡೆ ಗಮನಹರಿಸಲಾಗದಿರುವುದು, ಏಕಾಗ್ರತೆಯನ್ನು ಕಳೆದುಕೊಳ್ಳುತ್ತಿರುವುದು ಕಂಡು ಬಂದಿದ್ದು, ಈ ಸಮಸ್ಯೆ ನಿವಾರಣೆಯಾಗದೆ ವಿದ್ಯಾರ್ಥಿ ಪರೀಕ್ಷೆಯನ್ನು ಸಮರ್ಥವಾಗಿ ಬರೆಯಲು ಸಾಧ್ಯವಾಗುವುದಿಲ್ಲ. ಈ ಸಮಸ್ಯೆಗಳ ನಿವಾರಣೆ ಮಾಡಿ, ಪರೀಕ್ಷೆಯನ್ನು ಸಮರ್ಥವಾಗಿ ಬರೆಯಲು ಸ್ಫೂರ್ತಿ ನೀಡಬೇಕಾದ ಆವಶ್ಯಕತೆ ಇದೆ.
ಈ ರೀತಿಯ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಂಡು ಹಿಡಿಯುವ ಹಾಗೂ ಭಯರಹಿತವಾಗಿ ಪರೀಕ್ಷೆ ಬರೆಯಲು ಅತ್ಮಸ್ಥೆರ್ಯ (confidence) ತುಂಬುವ ಸದುದ್ದೇಶದಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಹಿಂದಿನ ವರ್ಷಗಳಂತೆ ಈ ವರ್ಷವೂ ‘ಸಹಾಯವಾಣಿ’ (Helpline) ಕೌನ್ಸಿಲಿಂಗ್ (counseling) ಕಾರ್ಯಕ್ರಮವನ್ನು 2024ನೇ ಮಾರ್ಚ್ 14ರಂದು ಗುರುವಾರ ಅಪರಾಹ್ನ 02.30 ಗಂಟೆಗೆ ಪ್ರಾರಂಭಿಸಲಾಗುವುದು. ಇದಕ್ಕಾಗಿ 080-23310075 ಮತ್ತು 080-23310076 ಎರಡು ದೂರವಾಣಿ ಸಂಖ್ಯೆಗಳನ್ನು ಮೀಸಲಿಡಲಾಗಿದೆ.
ಈ “ಸಹಾಯವಾಣಿ”ಯು ಮಾರ್ಚ್ 14ರಿಂದ 22 ರವರೆಗೆ ಪ್ರತಿ ದಿನ ಅಪರಾಹ್ನ 02.30 ರಿಂದ ಸಂಜೆ 6.30 ಗಂಟೆಯವರೆಗೆ ಹಾಗೂ ಮಾರ್ಚ್ 17 ರಂದು ಬೆಳಿಗ್ಗೆ 11.00 ಗಂಟೆಯಿಂದ ಸಂಜೆ 6.00 ರವರೆಗೆ ಕಾರ್ಯನಿರ್ವಹಿಸಲಾಗುತ್ತದೆ.
ಮಾರ್ಚ್ 25ರಿಂದ ಏಪ್ರಿಲ್ 06ರ ವರೆಗೆ ನಿಯಂತ್ರಣ ಕೊಠಡಿಯಾಗಿ ಬೆಳಿಗ್ಗೆ 10.00 ರಿಂದ ಮದ್ಯಾಹ್ನ 2.00 ಗಂಟೆಯವರೆಗೆ ಪರೀಕ್ಷಾ ದಿನಗಳಂದು ಮಾತ್ರ ಕಾರ್ಯನಿರ್ವಹಿಸಲಾಗುತ್ತದೆ.
ಪೆÇೀಷಕರು, ವಿದ್ಯಾರ್ಥಿಗಳು ಮೇಲೆ ತಿಳಿಸಿರುವ ದೂರವಾಣಿ ಸಂಖ್ಯೆಗೆ ಕರೆಮಾಡಿ ತಮ್ಮ ಸಮಸ್ಯೆಗಳಿಗೆ, ಸಂದೇಹಗಳಿಗೆ ಪರಿಹಾರ ಪಡೆದುಕೊಳ್ಳಬಹುದು. ಹೆಚ್ಚಿನ ರೀತಿಯಲ್ಲಿ ವಿದ್ಯಾರ್ಥಿಗಳು, ಪೆÇೀಷಕರು ಸದರಿ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.