ರಾಮನಗರ: 2023-24ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ (ಎಂ.ಎಸ್.ಪಿ) ಜಿಲ್ಲೆಯ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಯು ಆರಂಭಗೊAಡಿದ್ದು, ಜಿಲ್ಲೆಯ ಎಲ್ಲಾ ರೈತರು ಇದರ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.ಜಿಲ್ಲೆಯಲ್ಲಿ ಈಗಾಗಲೇ ಚನ್ನಪಟ್ಟಣ/ಕನಕಪುರ/ಮಾಗಡಿ/ರಾಮನಗರ ತಾಲ್ಲೂಕುಗಳಲ್ಲಿಯೂ ಸಹ ಖರೀದಿ ಕೇಂದ್ರ ತೆರೆಯಲಾಗಿರುತ್ತದೆ.
ಖರೀದಿ ಕೇಂದ್ರದ ವಿಳಾಸ: ಕೆ.ಎಫ್.ಸಿ.ಎಸ್.ಸಿ. ಚನ್ನಪಟ್ಟಣ ಸಗಟು ಮಳಿಗೆ, ಜಾನಪದ ಲೋಕದ ಎದುರು, ಬಿ.ಎಂ. ರಸ್ತೆ, ಚನ್ನಪಟ್ಟಣ, ಕೆ.ಎಫ್.ಸಿ.ಎಸ್.ಸಿ. ಕನಕಪುರ ಸಗಟು ಮಳಿಗೆ, ಮೆಳೆಕೋಟೆ, ರಾಮನಗರ ರಸ್ತೆ, ಕನಕಪುರ, ಕೆ.ಎಫ್.ಸಿ.ಎಸ್.ಸಿ. ಮಾಗಡಿ ಸಗಟು ಮಳಿಗೆ, ಗುಡೇಮಾರನಹಳ್ಳಿ ರಸ್ತೆ, ಮಾಗಡಿ, ಕೆ.ಎಫ್.ಸಿ.ಎಸ್.ಸಿ. ರಾಮನಗರ ಸಗಟು ಮಳಿಗೆ, ಜಾನಪದ ಲೋಕದ ಎದುರು, ಬಿ.ಎಂ. ರಸ್ತೆ, ರಾಮನಗರ
ರಾಗಿ ಖರೀದಿ ಕೇಂದ್ರಗಳಲ್ಲಿ ದಲ್ಲಾಳಿಗಳಿಗೆ ಅವಕಾಶವಿರುವುದಿಲ್ಲ, ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿಕೊAಡ ರೈತರು ಉತ್ತಮ ಗುಣಮಟ್ಟದ ರಾಗಿಯನ್ನು ಮಾತ್ರ ನೀಡಬೇಕು, ಖರೀದಿ ಕೇಂದ್ರದ ಅಧಿಕಾರಿಗಳು ಮತ್ತು ಗ್ರೇಡರ್ ಗಳು ಗುಣಮಟ್ಟದ ರಾಗಿಯನ್ನು ಮಾತ್ರ ರೈತರಿಂದ ಖರೀದಿಸಬೇಕು, ರೈತರು ಯಾವುದೇ ದೂರುಗಳು, ಸಮಸ್ಯೆಗಳಿದ್ದಲ್ಲಿ ತಾಲ್ಲೂಕಿನ ತಹಶೀಲ್ದಾರ್, ಆಹಾರ ಶಿರಸ್ತೇದಾರರು ಹಾಗೂ ಆಹಾರ ನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ, ಖರೀದಿ ಕೇಂದ್ರಗಳಲ್ಲಿ ರೈತರನ್ನು ಹೊರತುಪಡಿಸಿ ಇತರೆ ಜನ/ದಲ್ಲಾಳಿ/ಮಧ್ಯವರ್ತಿಗಳು ಕಂಡು ಬಂದಲ್ಲಿ ಅವರ ವಿರುದ್ಧ ಕಾನೂನು ರೀತ್ಯಾ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು.
ಈ ಅವಕಾಶವನ್ನು ಜಿಲ್ಲೆಯ ರೈತರು ಸದುಪಯೋಗಪಡಿಸಿಕೊಳ್ಳುವಂತೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.