ಬೆಂಗಳೂರು : ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಬಿಜೆಪಿ ನಿನ್ನೆಯಷ್ಟೇ ಕರ್ನಾಟಕದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ನಡುವೆ ಪ್ರಧಾನಿ ಮೋದಿ ಅವರು ಎರಡು ದಿನ ರಾಜ್ಯದಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ.
ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಕರ್ನಾಟಕದಲ್ಲಿ ಪ್ರಚಾರ ನಡೆಸಲಿದ್ದಾರೆ. ಕರ್ನಾಟಕದ ಶಿವಮೊಗ್ಗ ಹಾಗೂ ಕಲಬುರಗಿಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ.
ಈ ಕುರಿತು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಮಾಹಿತಿ ನೀಡಿದ್ದು, ಮಾರ್ಚ್ 16ರಂದು ಮಧ್ಯಾಹ್ನ 2 ಗಂಟೆಗೆ ಕಲಬುರಗಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ ಎನ್.ವಿ. ಮೈದಾನದಲ್ಲಿ ನಡೆಯುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ.
ಮಾರ್ಚ್ 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದ ಅಲ್ಲಮ ಪ್ರಭು ಮೈದಾನದಲ್ಲಿ ನಡೆಯುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.