ಬೆಂಗಳೂರು : ಬೆಂಗಳೂರಿನ ಶೇಷಾದ್ರಿಪುರಂನ ಖಾಸಗಿ ಹೋಟೆಲ್ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವಿದೇಶಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ನಡೆದಿದೆ.
ಶೇಷಾದ್ರಿಪುರಂ ಠಾಣಾ ವ್ಯಾಪ್ತಿಯ ಬಿಡಿಎ ಸೇತುವೆ ಬಳಿಯ ಖಾಸಗಿ ಹೋಟೆಲ್ ನಲ್ಲಿ ವಿದೇಶಿ ಮಹಿಳೆಯ ಶವ ಪತ್ತೆಯಾಗಿದೆ. ನಾಲ್ಕು ದಿನದ ಹಿಂದೆ ಟೂರಿಸ್ಟ್ ವೀಸಾದಡಿ ಬೆಂಗಳೂರಿಗೆ ಮಹಿಳೆ ಆಗಮಿಸಿದ್ದರು.
ನಿನ್ನೆ ಸಂಜೆ ಸಿಬ್ಬಂದಿ ಎಷ್ಟೇ ಕೂಗಿದ್ರೂ ಮಹಿಳೆ ಹೊರಬಾರದ ಹಿನ್ನೆಲೆಯಲ್ಲಿ ಮಾಸ್ಟರ್ ಕೀ ಮೂಲಕ ಬಾಗಿಲು ತೆರೆದಾಗ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮಹಿಳೆಯ ಮೃತದೇಹ ಕೊಲೆಯಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.