ಬೆಂಗಳೂರು : ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷಾ ಕರ್ತವ್ಯಕ್ಕೆ ಪ್ರಾಥಮಿಕ ಶಿಕ್ಷಕರನ್ನು ನೇಮಕ ಮಾಡಿ, ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ (KSEAB) ಆದೇಶ ಹೊರಡಿಸಿತ್ತು ಆದರೆ ಇದೀಗ ಈ ಆದೇಶವನ್ನು ಮಂಡಳಿಯು ಹಿಂಪಡೆದುಕೊಂಡಿದೆ ಎಂದು ತಿಳಿದುಬಂದಿದೆ.
ಆಂಡ್ರಾಯ್ಡ್ ಬಳಕೆದಾರರಿಗೆ ‘ಕೇಂದ್ರ ಸರ್ಕಾರ’ದಿಂದ ಮಹತ್ವದ ಎಚ್ಚರಿಕೆ: ಕೂಡಲೇ ಈ ಕೆಲಸ ಮಾಡುವಂತೆ ಸೂಚನೆ!
ಕಳೆದ ವರ್ಷ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ನಕಲು ಮಾಡಲು ಶಿಕ್ಷಕರೇ ಸಹಾಕ ಮಾಡಿದ್ದರು. ಈ ಆರೋಪದ ಮೇಲೆ 38 ಶಿಕ್ಷಕರನ್ನು ಅಮಾನತು ಮಾಡಲಾಗಿತ್ತು. ಹಾಗಾಗಿ, ಈ ಬಾರಿಯ ಪರೀಕ್ಷೆಗೆ ನಕಲು ಪ್ರೌಢಶಾಲಾ ಸಹ ಶಿಕ್ಷಕರ ಬದಲು ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸಲು ಸುತ್ತೋಲೆ ಹೊರಡಿಸಲಾಗಿತ್ತು. ಆದರೆ ಈಗ ಆ ಆದೇಶವನ್ನು ಹಿಂಪಡೆಯಲಾಗಿದೆ.
ಕೋಲಾರದಲ್ಲಿ ‘ಡಾಂಬರು’ ಮಿಶ್ರಣ ಘಟಕದಿಂದ ‘ಪರಿಸರ ಮಾಲಿನ್ಯ’ : ಸರ್ಕಾರಕ್ಕೆ ನೋಟಿಸ್ ನೀಡಿದ ಹೈಕೋರ್ಟ್
ಈ ಹಿಂದೆ 2023ರ ಮಾರ್ಚ್–ಏಪ್ರಿಲ್ನಲ್ಲಿ ನಡೆದಿದ್ದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಕಲು ಮಾಡಲು ವಿದ್ಯಾರ್ಥಿಗಳಿಗೆ ಸಹಕರಿಸಿದ ಆರೋಪದ ಮೇಲೆ 38 ಶಿಕ್ಷಕರನ್ನು ಅಮಾನತು ಮಾಡಲಾಗಿತ್ತು. ಹಾಗಾಗಿ, 2024ರ ಪರೀಕ್ಷೆಯಲ್ಲಿ ನಕಲು, ವ್ಯವಹಾರಕ್ಕೆ ಸಂಪೂರ್ಣ ಕಡಿವಾಣ ಹಾಕಲು ಪರೀಕ್ಷಾ ಕಾರ್ಯಕ್ಕೆ ಪ್ರೌಢಶಾಲಾ ಸಹ ಶಿಕ್ಷಕರ ಬದಲು ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸಲು ಸುತ್ತೋಲೆ ಹೊರಡಿಸಲಾಗಿತ್ತು.
ಗೂಗಲ್ ಕ್ರೋಮ್ ಬಳಕೆದಾರರಿಗೆ ಕೇಂದ್ರ ಸರ್ಕಾರದಿಂದ ‘ಹೈ ರಿಸ್ಕ್’ ಎಚ್ಚರಿಕೆ !
ಈ ಕುರಿತು ಸರ್ಕಾರದ ಕ್ರಮ ಸರಿ ಇಲ್ಲ ಮರುಪರಿಶೀಲಿಸಬೇಕು ಎಂದು ವಿಧಾನಪರಿಷತ್ತಿನ ಸದಸ್ಯರಾದ ಪುಟ್ಟಣ್ಣ ಹಾಗೂ ಮರಿತಿಬ್ಬೇಗೌಡ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದರು.ಪುಟ್ಟಣ್ಣ, ಮರಿತಿಬ್ಬೇಗೌಡ ಸೇರಿದಂತೆ ವಿವಿಧ ಶಾಸಕರು ಹಾಗೂ ಶಿಕ್ಷಕ ಸಮುದಾಯ ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿ ಕೆಎಸ್ಇಎಬಿ ಪರಿಷ್ಕೃತ ಆದೇಶ ಹೊರಡಿಸಿದೆ.