ಹುಬ್ಬಳ್ಳಿ : ಕಳೆದ ವರ್ಷ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಟಿಕೆಟ್ ದೊರೆಯದ ಕಾರಣ ಅಸಮಾಧಾನಗೊಂಡಿದ್ದ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ನಂತರ ಕಾಂಗ್ರೆಸ್ ಟಿಕೆಟ್ನಿಂದ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಮಹೇಶ್ ಟೆಂಗಿನಾಯಿ ವಿರುದ್ಧ ಸೋಲನುಭವಿಸಿದ್ದರು. ಇತ್ತೀಚಿಗೆ ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಇದೀಗ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರ ಟಿಕೆಟ್ ತಪ್ಪಿದ ಹಿನ್ನೆಲೆ ಶೆಟ್ಟರ್ ಮುಂದಿನ ನಡೆ ಏನು ಎಂಬುದು ಕುತೂಹಲ ಮೂಡಿಸಿದೆ.
ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ದೂರದೃಷ್ಟಿ ಪ್ರಧಾನಿ ಮೋದಿಗೆ ಇದೆ: ಅಮಿತ್ ಶಾ
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರು ಸಂಜೆವರೆಗೂ ಕಾದು ಒಂದು ನಿರ್ಧಾರಕ್ಕೆ ಬರುತ್ತೇನೆ. ಹುಬ್ಬಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದರು.ನಾನು ಬೆಳಗಾವಿಗೆ ಹೋಗುವ ಬಗ್ಗೆ ನಿರ್ಧಾರ ಮಾಡಿಲ್ಲ. ವರಿಷ್ಠರು ಹಾಗೂ ಬೆಳಗಾವಿ ನಾಯಕರ ಜೊತೆ ಚರ್ಚೆ ಮಾಡುತ್ತೇನೆ. ಕೆಲವು ಆಂತರಿಕ ಬೆಳವಣಿಗೆಗೆಗಳನ್ನು ನಾನು ಇಲ್ಲಿ ಹೇಳುವುದಿಲ್ಲ ಎಂದರು.
Job Alert : 277 ʻಗ್ರೂಪ್ –ಬಿʼ ಹುದ್ದೆಗಳ ನೇಮಕಾತಿಗೆ ʻKPSCʼ ಯಿಂದ ಅರ್ಜಿ ಆಹ್ವಾನ : ಇಲ್ಲಿದೆ ಮಾಹಿತಿ
ಟಿಕೆಟ್ ಘೋಷಣೆಯಾದ ಬಳಿಕ ಬಿ ಎಸ್ ಯಡಿಯೂರಪ್ಪ ಹಾಗೂ ವಿಜಯೇಂದ್ರ ಮಾತನಾಡಿದ್ದಾರೆ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರು ಕೂಡ ಪ್ರಚಾರ ಮಾಡುತ್ತೇನೆ ಪ್ರಹ ಜೋಶಿ ಪರವಾಗಿ ಪ್ರಚಾರ ಮಾಡುತ್ತೀರಾ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು xyz ಯಾರೇ ಇದ್ದರೂ ಕೂಡ ನಾನು ಅವರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ತಿಳಿಸಿದರು.
ಇನ್ಮುಂದೆ ‘ಈ ನಾಯಿ’ಗಳನ್ನು ಸಾಕುವುದು ‘ನಿಷೇಧ’: ಕೇಂದ್ರ ಸರ್ಕಾರ ಆದೇಶ
ಕಾಂಗ್ರೆಸ್ ಪಕ್ಷದಲ್ಲಿ ಇದ್ದಾಗ ಅವರನ್ನು ಕಾಂಗ್ರೆಸ್ ಪಕ್ಷವು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿತ್ತು. ಈ ಎಲ್ಲ ಬೆಳವಣಿಗೆಗಳ ನಂತರ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಶೆಟ್ಟರ್ ಮತ್ತೆ ಬಿಜೆಪಿಯತ್ತ ಮುಖ ಮಾಡಿದ್ದರು.ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡೇ ಅವರು ಈ ನಿರ್ಧಾರಕ್ಕೆ ಬಂದಿದ್ದರು. ಆದರೆ, ಶೆಟ್ಟರ್ ಘರ್ ವಾಪ್ಸಿಗೆ ಮಹೇಶ್ ಟೆಂಗಿನಕಾಯಿ, ಪ್ರಲ್ಹಾದ್ ಜೋಶಿ ವಿರೋಧವಿದೆ ಎನ್ನಲಾಗಿತ್ತು. ಈಗ ಅವರಿಗೆ ಲೋಕಸಭಾ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.