ಹುಬ್ಬಳ್ಳಿ : ಲೋಕಸಭೆ ಚುನಾವಣೆಗೆ ಹುಬ್ಬಳ್ಳಿ ಕ್ಷೇತ್ರಕ್ಕೆ ಯಾಕೆಂದರೆ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಟಿಕೆಟ್ ಘೋಷಣೆ ಬಳಿಕ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಅವರು, ನಾನು ಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ. ಜಗದೀಶ್ ಶೆಟ್ಟರ್ ನನಗೆ ಟಿಕೆಟ್ ತಪ್ಪಿಸಲು ತಂತ್ರ ಮಾಡಿದ್ದಾರೆ ಎಂಬುವಂತದ್ದನ್ನು ನಾನು ನಂಬುವುದಿಲ್ಲ ಎಂದು ಹೇಳಿದ್ದಾರೆ.
ಸಿನಿಮಾ ಬಿಡುಗಡೆಯಾದ 48 ಗಂಟೆಯೊಳಗೆ ವಿಮರ್ಶೆ ಮಾಡುವಂತಿಲ್ಲ : ಹೈಕೋರ್ಟ್ ಮಹತ್ವದ ಸೂಚನೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಗದೀಶ್ ಶೆಟ್ಟರ್ ಗೆ ಟಿಕೆಟ್ ತಪ್ಪಿಸುವಲ್ಲಿ ಪ್ರಯತ್ನಿಸುತ್ತೇನೆ ಎಂಬುದಲ್ಲ ಸುಳ್ಳು ಅದನ್ನು ನಾನು ನಂಬುವುದಿಲ್ಲ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನಾನು ಮೂರು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್: ಪಿಯು ಮಂಡಳಿ ನೀಡಿದೆ ಈ ಸ್ಪಷ್ಟನೆ!
ಅಲ್ಲದೆ ಕರ್ನಾಟಕದಲ್ಲಿ 20 ಅಭ್ಯರ್ಥಿಗಳ ಘೋಷಣೆ ಮಾಡಿದೆ. ಅದರಲ್ಲಿ ಧಾರವಾಡಕ್ಕೆ ನನ್ನನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದಾರೆ. ಮೋದಿ, ಜೆಪಿ ನಡ್ಡಾ, ಅಮಿತ್ ಶಾ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ದೇಶದಲ್ಲಿ NDA 400 ಸ್ಥಾನ ಗೆಲ್ಲಲಿದೆ. ಆಯ್ಕೆಯಾದ ಎಲ್ಲ ಅಭ್ಯರ್ಥಿಗಳಿಗೆ ಅಭಿನಂದನೆ. ಮೂರನೇ ಬಾರಿಗೆ ನಾವು ದಾಖಲೆಯ ವಿಜಯ ಸಾಧಿಸುತ್ತೇವೆ. ಆದಷ್ಟು ಬೇಗ ಮುಂದಿನ ಅಭ್ಯರ್ಥಿಗಳ ಹೆಸರು ಘೋಷಣೆ ಆಗಲಿದೆ ಎಂದು ಜೋಶಿ ಹೇಳಿದರು.