ಬೆಂಗಳೂರು : ಕರ್ನಾಟಕ ಗೃಹಮಂಡಳಿ ವತಿಯಿಂದ ರಾಜಧಾನಿ ಬೆಂಗಳೂರು ಹೊರವಲಯದಲ್ಲಿ 500 ಎಕರೆ ಪ್ರದೇಶದಲ್ಲಿ ನೂತನ ಬಡಾವಣೆ (ಮಿನಿ ಟೌನ್ ಶಿಪ್ ) ನಿರ್ಮಾಣ ಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಬೆಂಗಳೂರು ದಕ್ಷಿಣ ತಾಲೂಕಿನ ಕೆಂಗೇರಿ ಹೋಬಳಿ ಹಾಗೂ ರಾಮನಗರ ಜಿಲ್ಲೆ ಬಿಡದಿ ಹೋಬಳಿ ಯ ಏಳು ಗ್ರಾಮಗಳ 500 ಎಕರೆ ಪ್ರದೇಶದಲ್ಲಿ 50:50 ಅನುಪಾತದಲ್ಲಿ ಬಡಾವಣೆ ನಿರ್ಮಾಣ ವಾಗಲಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
1066.50ಕೋಟಿ ರೂ. ಮೊತ್ತದ ಯೋಜನೆಗೆ ರೈತರು ಜಮೀನು ನೀಡಲು ರೈತರು ಒಪ್ಪಿಗೆ ಪತ್ರ ನೀಡಿದ್ದಾರೆ. ಈ ಯೋಜನೆ ಬೆಂಗಳೂರು -ಮೈಸೂರು ರಾಷ್ಟ್ರೀಯ ಹೆದ್ದಾರಿ ಯಿಂದ 5.5 ಕಿ. ಮೀ. ವ್ಯಾಪ್ತಿಯಲ್ಲಿ ಬರಲಿದೆ. ರೈತರ ಜತೆ ಪಾಲುದಾರಿಕೆ ಯಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಸತಿ ಯೋಜನೆ ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದ್ದಾರೆ.
ಈ ಹಿಂದೆ ಕೆಂಗೇರಿ ಹೋಬಳಿ ಹಾಗೂ ಬಿಡದಿ ಹೋಬಳಿಯಲ್ಲಿ ನಿವೇಶನ ಬೇಡಿಕೆ ಸಮೀಕ್ಷೆ ಮಾಡಿದ್ದು, 2666 ಅರ್ಜಿಗಳು ಬಂದಿದ್ದು, ಈ ಹಿಂದೆ ನಿವೇಶನ ಬಯಸಿ ಸಲ್ಲಿಸಿರುವ 3881 ಅರ್ಜಿಗಳು ಕೂಡಾ ಹಂಚಿಕೆಗೆ ಬಾಕಿ ಇದ್ದು ಪ್ರಸ್ತಾಪಿತ ಯೋಜನೆಗೆ ಪರಿಗಣಿಸಲಾಗುವುದು ಎಂದು ವಿವರಿಸಿದ್ದಾರೆ.
Breaking News: ನೂತನ ಚುನಾವಣಾ ಆಯುಕ್ತರಾಗಿ ಸುಖ್ಬೀರ್ ಸಂಧು, ಜ್ಞಾನೇಶ್ ಕುಮಾರ್ ನೇಮಕ