ಬೆಂಗಳೂರು : ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ಆಗಮಿಸಲಿದ್ದು ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ ಹೀಗಾಗಿ ಈ ಲೋಕಸಭಾ ಚುನಾವಣೆಯಲ್ಲಿ ಎಚ್ ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಬಿಜೆಪಿ ಅಭ್ಯರ್ಥಿಗಳ ಪರ ಕೆಲಸ ಮಾಡಲಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ತಿಳಿಸಿದರು.
ಡಾ.ಮಂಜುನಾಥ್ ಸಾಧನೆಯ ಮುಂದೆ ಆತ ‘ಉಂಗುಷ್ಟಕ್ಕೂ’ ಸಮನಲ್ಲ : ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ
ಬೆಂಗಳೂರಿನಲ್ಲಿ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದೇವೆ ಎಂದು ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಎಚ್ ಡಿ ದೇವೇಗೌಡ ತಿಳಿಸಿದರು. ಕೋಲಾರ ಮಂಡ್ಯ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳನ್ನು ಕೊಟ್ಟಿದ್ದಾರೆ ಉಳಿದ 25 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಮತ ಹಾಕಬೇಕು ಎಂದರು.
BREAKING: ‘ರಾಜ್ಯ ಸರ್ಕಾರ’ದಿಂದ ಎಲ್ಲಾ ‘ಸಹಕಾರ ಸಂಘ, ಬ್ಯಾಂಕು’ಗಳ ‘ಚುನಾವಣೆ ಮುಂದೂಡಿಕೆ’ ಮಾಡಿ ಆದೇಶ
ಎಚ್ಡಿಕೆ ಹಾಗೂ ನಿಖಿಲ್ ಬಿಜೆಪಿ ಅಭ್ಯರ್ಥಿಗಳ ಪರ ಕೆಲಸ ಮಾಡುತ್ತಾರೆ. ಮಂಜುನಾಥರನ್ನು ಬಿಜೆಪಿಯಿಂದ ಕಣಕ್ಕಿಳಿಸಿ ಎಂದು ಒತ್ತಡ ಇತ್ತು.ಬಿಜೆಪಿ ಹೈಕಮಾಂಡ್ ಒತ್ತಡ ಹಾಕಿದ್ದಕ್ಕೆ ಎಚ್ಡಿಕೆಗೆ ಒಪ್ಪಿಗೆ ನೀಡಿದ್ದಾರೆ.ಡಾಕ್ಟರ್ ಮಂಜುನಾಥ್, ದೆಹಲಿಗೆ ತೆರಳಿ ಅಮಿತ್ ಶಾ ಅವರನ್ನು ಬೇಟಿಯಾಗಲಿದ್ದಾರೆ ಎಂದು ಬೆಂಗಳೂರಿನಲ್ಲಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ತಿಳಿಸಿದರು.
BREAKING : ‘ರಾಮೇಶ್ವರಂ ಕೆಫೆ’ ಬಾಂಬ್ ಸ್ಪೋಟ ಪ್ರಕರಣ : 4 ವರ್ಷಗಳ ಹಿಂದೆಯೇ ಸ್ಫೋಟಕ್ಕೆ ನಡೆದಿತ್ತು ಭಾರಿ ಸಂಚು