ಬೆಂಗಳೂರು: ಅತ್ತಿಬೆಲೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿ ಖಾಲಿ ಇರುವಂತ 72 ಅಂಗನವಾಡಿ ಕಾರ್ಯಕರ್ತೆ ಹಾಗೂ 157 ಅಂಗನವಾಡಿ ಸಹಾಯಕಿಯರ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಕುರಿತಂತೆ ಆನೇಕಲ್ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಟಿಪ್ಪಣಿ ಹೊರಡಿಸಿದ್ದಾರೆ. ಅದರಲ್ಲಿ ಶಿಶು ಅಭಿವೃದ್ಧಿ ಯೋಜನೆ ಆನೇಕಲ್ ತಾಲ್ಲೂಕು ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 72 ಅಂಗನವಾಡಿ ಕಾರ್ಯಕರ್ತೆ ಹಾಗೂ 157 ಅಂಗನವಾಡಿ ಸಹಾಯಕಿಯರ ಗೌರವಧನ ಆಧಾರದ ಹುದ್ದೆಗಳಿಗಾಗಿ ಆಫ್ ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿದ್ದು, ದಿನಾಂಕ:22/02/2024 ರಂದು ನಡೆದ ತಾಲ್ಲೂಕು ಮಟ್ಟದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಪರಿಶೀಲನಾ ಸಮಿತಿ ಸಭೆಯಲ್ಲಿ ಅರ್ಜಿಗಳ ಪೆಟ್ಟಿಗೆಯನ್ನು ತೆರೆದು, ಪರಿಶೀಲಿಸಿ, ಸಮಿತಿ ಸದಸ್ಯರ ಅನುಮೋದನೆ ಪಡೆದು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ ಎಂದಿದ್ದಾರೆ.
ದಿನಾಂಕ:13/03/2024 ರಂದು ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಆಯ್ಕೆ ಸಮಿತಿ ಸಭೆಯಲ್ಲಿ ಸದರಿ ಪರಿಶೀಲನಾ ಪಟ್ಟಿಯನ್ನು ಮಂಡಿಸಲಾಯಿತು ಎಂದು ಹೇಳಿದ್ದಾರೆ.
ನೇಮಕಾತಿ ಪ್ರಕ್ರಿಯೆಯಲ್ಲಿ ತಾತ್ಕಾಲಿಕವಾಗಿ ಆಯ್ಕೆಯಾಗಿರುವ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಜಿಲ್ಲಾ ಮಟ್ಟದ ಸಮಿತಿಯ ಸದಸ್ಯರ ಅನುಮೋದನೆ ಪಡೆದಿದ್ದು, ಸದರಿ ಪಟ್ಟಿಯನ್ನು ಈ ಕಛೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲೆಗಳೊಂದಿಗೆ ದಿನಾಂಕ:13/03/2024 ರಿಂದ 07 ದಿನಗಳೊಳಗಾಗಿ ಆಕ್ಷೇಪಣೆಗಳನ್ನು ಈ ಕಛೇರಿಗೆ ಸಲ್ಲಿಸುವಂತೆ ಕೋರಿದ್ದಾರೆ.
ತಪ್ಪು ತಿದ್ದಿಕೊಳ್ಳಲು ಅವಕಾಶ ಕೊಡಿ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭಾವುಕ ನುಡಿ