ಬೆಂಗಳೂರು: ಬಿಜೆಪಿಯವರು ಗ್ಯಾರಂಟಿ ಯೋಜನೆಗಳಿಂದ ಖಜಾನೆ ಖಾಲಿಯಾಗುತ್ತೆ. ಹಾಗೇ ಹೀಗೆ ಅಂತ ಬೊಬ್ಬೆ ಹೊಡೆದುಕೊಂಡ್ರು. ಆದ್ರೇ ರಾಜ್ಯದ ಅಭಿವೃದ್ಧಿಗಾಗಿ 1.20 ಲಕ್ಷ ಕೋಟಿ ಮೀಸಲಿಟ್ಟಿದ್ದೇವೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಅವರು, ಗ್ಯಾರಂಟಿ ಯೋಜನೆಗಳಿಂದ ಖಜಾನೆ ಖಾಲಿಯಾಗಿದೆ, ಕರ್ನಾಟಕ ಆರ್ಥಿಕ ದಿವಾಳಿ ಆಗುತ್ತದೆಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದರೂ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ಇದಕ್ಕಾಗಿ 36 ಸಾವಿರ ಕೋಟಿ ರೂ. ಖರ್ಚು ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
2024-25ನೇ ಸಾಲಿನ ಬಜೆಟ್‌ನಲ್ಲಿ ಗ್ಯಾರಂಟಿಗಳಿಗೆ 52,090 ಕೋಟಿ ರೂ. ಮೀಸಲಿಟ್ಟಿದ್ದೇವೆ. ಬಿಜೆಪಿ, ಜೆಡಿಎಸ್‌ನವರು ದುಡ್ಡಿಲ್ಲ ಎನ್ನುತ್ತಿದ್ದರೂ ಅಭಿವೃದ್ಧಿಗಾಗಿ 1.20 ಲಕ್ಷ ಕೋಟಿ ರೂ. ಮೀಸಲಿಟ್ಟಿದ್ದೇವೆ. ಬಸವರಾಜ ಬೊಮ್ಮಾಯಿ, ಅಶೋಕ್, ವಿಜಯೇಂದ್ರ, ಯಡಿಯೂರಪ್ಪ ಅವರೇ ಬನ್ನಿ, ಒಂದೇ ವೇದಿಕೆ ಮೇಲೆ ಈ ಬಗ್ಗೆ ಚರ್ಚೆ ಮಾಡೋಣ ಎಂದು ಚರ್ಚೆಗೆ ಅಹ್ವಾನ ನೀಡಿದ್ದಾರೆ.
ನಾನು ಮಾಜಿಯಾದರು ಏನಾದ್ರೂ ನಿಮ್ಮ ಕೆಲಸ ಆಗ್ಬೇಕಾ? ನನಗೆ ಕರೆ ಮಾಡಿ- ಪ್ರತಾಪ್ ಸಿಂಹ