ಬೆಂಗಳೂರ: ಮಾಜಿ ಸಿಎಂ ಬಿ.ಎಸ್ ಯಡಿಯ್ಯೂರಪ್ಪನವರ ವಿರುದ್ದ ಪೋಕ್ಸೋ ಕೇಸ್ ದಾಖಲಾಗಿದ್ದು, ಈಗ ಅವರಿಗೆ ಬಂಧನ ಭೀತಿ ಎದುರಾಗಿದೆ.
BIGG NEWS: ಗುಬ್ಬಿ ಶಾಸಕ ಶ್ರೀನಿವಾಸ್ರಿಂದ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ, ದೂರು ದಾಖಲು!
ಈ ನಡುವೆ ಘಟನೆ ಸಂಬಂಧ ಮಾತನಾಡಿರುವ ಗೃಹ ಸಚಿವ ಜಿ.ಪರಮೇಶ್ವರ್ ಅವರು ಘಟನೆ ಸಂಬಂಧ ತನಿಖೆ ನಡೆಯುತ್ತಿದ್ದು, ಅಗತ್ಯವಿದ್ದರೇ ಮಹಿಳೆಗೆ ಸೂಕ್ತ ರಕ್ಷಣೆ ನೀಡಲಾಗುವುದು ಅಂಥ ಹೇಳಿದರು. ಇನ್ನೂ ಘಟನೆ ಸಂಬಂಧ ಈಗಾಗಲೇ ಸಿಎಂ ಹಾಗೂ ಡಿಸಿಎಂ ಕೂಡ ಮಾಹಿತಿಯನ್ನು ಪಡೆದುಕೊಂಡಿದ್ದು, ಮುಂದಿನ ಕ್ರಮದ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ ಅಂಥ ಹೇಳಿದರು. ಇದೇ ವೇಳೆ ಅವರು ಮಾತನಾಡಿ, ಇದು ಒಬ್ಬ ಮಾಜಿ ಸಿಎಂ ವಿಷಯಕ್ಕೆ ಸಂಬಂಧಿಸಿದ ಕೇಸ್ ಆಗಿರುವುದರಿಂದ ಬಹಳ ಸೂಕ್ಷ್ಮ ವಿಷಯ. ಹೀಗಾಗಿ ಅಗತ್ಯ ಬಿದ್ದರೆ ಮಹಿಳೆಗೆ ರಕ್ಷಣೆ ಕೊಡ್ತೀವಿ ಎಂದು ಹೇಳಿದ್ದಾರೆ.
ಇನ್ನೂ ಬಾಲಕಿಯ ತಾಯಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆ ಮತ್ತು 354 (ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಳೆದ ಫೆಬ್ರವರಿ 2 ರಂದು ಯಡಿಯೂರಪ್ಪ ಬಳಿ ಸಹಾಯ ಕೇಳಲು ಹೋಗಿದ್ದಾಗ ತನ್ನ ಮಗಳು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ತಾಯಿ ದೂರು ನೀಡಿರುವುದು ಎಫ್ಐಆರ್ ನಲ್ಲಿ ತಿಳಿಸಲಾಗಿದೆ. ಇದಲ್ಲದೇ ಸಂತ್ರಸ್ತೆಯ ತಾಯಿ ನೀಡಿದ ದೂರಿನ ಅನ್ವಯ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ಎಫ್ಐಆರ್ನಲ್ಲಿ ತಿಳಿಸಿದ್ದಾರೆ.