ಬೆಂಗಳೂರು : ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಾದ ವಿಚಾರಕ್ಕೆ ಸಂಬಂಧಿಸಿದಂತೆ ಇದು ಒಂದು ಸೂಕ್ಷ್ಮ ವಿಷಯ ಗೃಹ ಸಚಿವರೇ ಮಾತನಾಡುತ್ತಾರೆ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಷೋ ಕೇಸ್ ದಾಖಲಾಗಿರುವುದು ಸೂಕ್ಷ್ಮವಾದ ವಿಚಾರವಾಗಿದೆ. ನನಗೆ ವಿಚಾರ ಗೊತ್ತಾಗಿದೆ ಆದರೆ ಹೆಚ್ಚಿಗೆ ಮಾಹಿತಿ ಇಲ್ಲ.ಹಾಗಾಗಿ ಈ ವಿಚಾರವಾಗಿ ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಅವರು ಮಾತನಾಡುತ್ತಾರೆ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.
WATCH VIDEO: ಸ್ಕೂಟಿಯೊಂದಿಗೆ ಛಾವಣಿಯ ಮೇಲೆ ಸಿಲುಕಿರುವ ಇಬ್ಬರು ಹುಡುಗಿಯರ ವೀಡಿಯೊ ವೈರಲ್!
ಇನ್ನು ಇದೇ ವಿಚಾರವಾಗಿ ಗ್ರಹಿಸುವ ಡಾ. ಜಿ ಪರಮೇಶ್ವರ್ ಅವರು ಮಾತನಾಡಿ, ಸಿಎಂ ಬಿಎಸ್ ವೈ ವಿರುದ್ಧ ಪೋಕ್ಸೋ ಕೇಸ್ ದಾಖಲು ವಿಚಾರ ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ ಎಂದು ಬೆಂಗಳೂರಿನಲ್ಲಿ ಗ್ರಹ ಇಲಾಖೆ ಸಚಿವ ಜಿ ಪರಮೇಶ್ವರ್ ತಿಳಿಸಿದ್ದು
ನಿನ್ನೆ ರಾತ್ರಿ ಮಹಿಳೆ ದೂರು ಕೊಟ್ಟಿದ್ದಾರೆ ಪರಿಶೀಲಿಸಿ, ಕೇಸ್ ದಾಖಲಿಸಲಾಗಿದೆ ಕಾನೂನು ಪ್ರಕಾರ ಈ ಕೇಸ್ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ.ತನಿಖೆ ಆಗುವವರೆಗೂ ಯಾವುದೇ ವಿಷಯ ತಿಳಿಸುವುದಕ್ಕೆ ಆಗುವುದಿಲ್ಲ. ಇದು ಒಬ್ಬ ಮಾಜಿ ಮುಖ್ಯಮಂತ್ರಿ ವಿಷಯಕ್ಕೆ ಸಂಬಂಧಿಸಿದ ಅಗತ್ಯವಿದ್ದರೆ ಮಹಿಳೆಗೆ ರಕ್ಷಣೆ ಕೊಡುತ್ತೇವೆ ಎಂದರು.
ಮಂಗಳೂರಿನ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ದೇಶದ ಮೊದಲ ಇನ್ನೋವೇಶನ್ ಹಬ್ ಸ್ಥಾಪನೆ
ವಶಕ್ಕೆ ಸಂಬಂಧಿಸಿದಂತೆ ತನಿಖೆಯ ಮೇಲೆ ನಿರ್ಧಾರವಾಗುತ್ತದೆ ಪ್ರಕರಣದ ಬಗ್ಗೆ ಸಿಎಂ ಡಿಸಿಎಂ ಜೊತೆಗೆ ಚರ್ಚೆ ಮಾಡಿದ್ದೇವೆ. ಮುಖ್ಯಮಂತ್ರಿಗಳು ಕೂಡ ಪ್ರಕರಣದ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ಬೆಂಗಳೂರಿನಲ್ಲಿ ಗೃಹಿ ಇಲಾಖೆ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು.
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಸಂತ್ರಸ್ತೆಯ ತಾಯಿ ನೀಡಿದ ದೂರಿನ ಅನ್ವಯ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ಎಫ್ಐಆರ್ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ.
ಹೊಸ ಚಪ್ಪಲಿ ಹಾಕಿದಾಗ ಕಾಲಿನಲ್ಲಿ ಗಾಯವಾಗುತ್ತಿದೆಯಾ?? ಹಾಗಿದ್ರೆ ಈ ಮನೆ ಮದ್ದು ಉಪಯೋಗಿಸಿ