Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಜುಲೈ 21ರಿಂದ ಸಂಸತ್ತಿನ ‘ಮಳೆಗಾಲದ ಅಧಿವೇಶನ’ ಆರಂಭ, ಆಗಸ್ಟ್ 21ಕ್ಕೆ ಮುಕ್ತಾಯ

03/07/2025 7:53 AM

GOOD NEWS: ರಾಜ್ಯದಲ್ಲಿ ನಿರಂತರ ‘ಕಣ್ಣಿನ ಆರೋಗ್ಯ’ ಒದಗಿಸುವ ‘ಆಶಾಕಿರಣ ದೃಷ್ಟಿ ಕೇಂದ್ರ’ಗಳ ಆರಂಭ

03/07/2025 7:51 AM

‘ಹಾಲಿವುಡ್ ವಾಕ್ ಆಫ್ ಫೇಮ್ ತಾರೆ’ ಗೌರವಕ್ಕೆ ಪಾತ್ರರಾದ ದೀಪಿಕಾ ಪಡುಕೋಣೆ | Hollywood Walk of Fame star

03/07/2025 7:49 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಕೆಂಡ’ ಸಿನಿಮಾದ ತಾಜಾ ಸುದ್ದಿಯ ಲಿರಿಕಲ್ ವೀಡಿಯೋ ಬಿಡುಗಡೆ!
FILM

‘ಕೆಂಡ’ ಸಿನಿಮಾದ ತಾಜಾ ಸುದ್ದಿಯ ಲಿರಿಕಲ್ ವೀಡಿಯೋ ಬಿಡುಗಡೆ!

By kannadanewsnow0715/03/2024 11:54 AM

ಕೆಎನ್‌ಎನ್‌ಸಿನಿಮಾಡೆಸ್ಕ್‌: ಇದೀಗ ಕೆಂಡ ಸಿನಿಮಾ ಸದ್ಯದಲ್ಲೇ ಬಿಡುಗಡೆಯಾಗಲಿದ್ದು, ಈ ನಡುವೆ ಜಯಂತ್‍ಕಾಯ್ಕಣಿ ರಚಿಸಿದ `ತಾಜಾ ತಾಜಾ ಸುದ್ದಿ’ ಗೀತೆಗೆ ಪುತ್ರ ರಿತ್ವಿಕ್‍ಕಾಯ್ಕಣಿ ಪ್ರಥಮ ಬಾರಿ ಸಂಗೀತ ಸಂಯೋಜಿಸಿರುವ ಲಿರಿಕಲ್ ವಿಡಿಯೋ ಹಾಡಿನ ಬಿಡುಗಡೆ ಕಾರ್ಯಕ್ರಮ ಎಸ್‍ಆರ್‍ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು.

ಇದೇ ವೇಳೆ ಸಿನಿಮಾ ತಂಡಕ್ಕೆ ಶುಭಹಾರೈಸಲು ಯೋಗರಾಜಭಟ್, ಸಂಗೀತ ಸಂಯೋಜಕ ವಿ.ಹರಿಕೃಷ್ಣ, ಡಿ.ಬೀಟ್ಸ್‍ನ ಶೈಲಜಾನಾಗ್ ಮತ್ತು ಜಯಂತ್‍ಕಾಯ್ಕಣಿ ಆಗಮಿಸಿದ್ದರು.ಅಂದ ಹಾಗೇ ರೂಪಾ ರಾವ್ ಕೆಂಡ ಚಿತ್ರದ ಮೂಲಕ ನಿರ್ಮಾಪಕಿಯಾಗಿದ್ದಾರೆ. ಸಹದೇವ ಕೆಲವಡಿ ಛಾಯಾಗ್ರಹಣ, ನಿರ್ದೇಶನದ ಜೊತೆಗೆ ನಿರ್ಮಾಣದಲ್ಲಿಯೂ ಭಾಗಿಯಾಗಿದ್ದಾರೆ.

ಇದೇ ವೇಳೆ ವಿಕಟ ಕವಿ ಯೋಗರಾಜಭಟ್ ಮಾತನಾಡಿ, ಎರಡನೇ ಲಾಕ್‍ಡೌನ್ ಸಂದರ್ಭದಲ್ಲಿ ರಿತ್ವಿಕ್‍ಕಾಯ್ಕಣಿ ಜೊತೆ ದೋಸ್ತಿ ಶುರುವಾಯಿತು. ಸದ್ಯದ ಪರಿಸ್ಥಿತಿಯಲ್ಲಿ ಹಾಡು ಇಲ್ಲದೆ ಸಿನಿಮಾ ಬಿಡುಗಡೆ ಅಂತ ಬಂದಾಗ ಎರಡು ತರದ ಅಪಾಯದಲ್ಲಿ ತಗಲಾಕೊಳ್ತಾರೆ. ಬೆಳಿಗ್ಗೆ ಸ್ನಾನದ ಮನೆಯಲ್ಲಿ ಇರುವಾಗ ನನ್ನ ಹಾಡು ಇಡೀ ಪ್ರಪಂಚ ತಿರುಗಿ ನೋಡುತ್ತೆ ಎನ್ನುವ ಕನಸು. ಹೊರಗೆ ಬಂದಾಗ ಯಾರಿಗೂ ಗೊತ್ತಿಲ್ಲವೆಂಬ ದುಗುಡ. ಒಂದು ವರ್ಷ ಕಷ್ಟಪಟ್ಟು ಚಿತ್ರ ಬಿಡುಗಡೆ ಮಾಡಿದ ನಂತರ, ಚಿತ್ರಮಂದಿರದಿಂದ ಆಚೆ ಬರುವ ಪ್ರೇಕ್ಷಕ ಮುಂದೆ ಯಾವುದು ಅಂತ ಕೇಳುತ್ತಾನೆ. ಆಗ ಅದಕ್ಕಿಂತಲೂ ಉತ್ತಮವಾದುದನ್ನು ಕೊಡಬೇಕು ಎನ್ನುವ ಛಲ ಹುಟ್ಟಿಕೊಳ್ಳುವುದು ಒಂಥರ ಡೇಂಜರ್. ನಾನು ಅಂದುಕೊಂಡಿದ್ದು ಏನು ಇಲ್ಲ. ಹಾಗೆ ನಾಲ್ಕು ಮಂದಿ ತಿರುಗಿ ನೋಡುವಂತೆ ಮಾಡೋದು ತುಂಬ ಕಷ್ಟದ ಕೆಲಸ. ಅಲ್ಲಿ ಸಕ್ಸಸ್ ಕಂಡರೆ, ಇಲ್ಲಿ ವಿರುದ್ಧವಾಗಿರುತ್ತದೆ. ಪ್ರತಿ ಸಿನಿಮಾವು ಇವರೆಡು ಡೇಂಜರ್‍ಗೆ ಬದುಕಬೇಕು. ಇವರೆಡು ಡೇಂಜರ್‍ಗಳ ಮಧ್ಯೆ ಇರೋದು ಸೃಜನಾತ್ಮಕ ಕ್ರಿಯೆ. ಇವೆಲ್ಲವು ನಿಮ್ಮೋಂದಿಗೆ ಸದಾ ಕಾಲ ಕಾಡಲಿ ಅಂತ ಚಿತ್ರ ತಂಡಕ್ಕೆ ಶುಭಹಾರೈಸಿದರು.

ಹಾಡು ಅನ್ನೋದು ಮಾರ್ಕೆಟ್‍ದಲ್ಲಿ ಎಷ್ಟು ಇದೆ ಅಂದರೆ, ನೂರಾರು ಹಾಡುಗಳ ಮಧ್ಯೆ ನಮ್ಮ ಗೀತೆಯನ್ನು ಹುಡುಕುವುದು ಸವಾಲಿನ ಕೆಲಸ ಆಗಿರುತ್ತದೆ. ಅವುಗಳ ಮಧ್ಯೆ ನಮ್ಮ ಸಾಂಗ್ ಗುರುತಿಸಿಕೊಳ್ಳಬೇಕೆಂಬುದು ಪ್ರತಿಯೊಬ್ಬ ಸಂಗೀತ ನಿರ್ದೇಶಕನ ಆಸೆಯಾಗಿರುತ್ತದೆ. ಬರಹಗಾರನ ಶ್ರಮ ಗೆದ್ದಾಗ ಖುಷಿ ಕೊಡುತ್ತೆ. ಸೋತಾಗ ಜವಬ್ದಾರಿ ಹೆಚ್ದಾಗುತ್ತದೆ. ಇದರಲ್ಲಿರುವ ಮೂರು ಗೀತೆಗಳು ಯಾವುದೇ ಸಂಗೀತದ ಛಾಯೆ ಕಾಣಿಸುವುದಿಲ್ಲ. ಅದೇ ತಂಡದ ಮೊದಲ ಗೆಲುವು ಎನ್ನಬಹದು. ಅದನ್ನು ಆಲಿಸಿದಾಗ ಹೊಸತನ ಕಂಡುಬರುತ್ತದೆ. ಹೀಗೆ ನಿಮ್ಮಗಳ ವಿನೂತನ ಪ್ರಯತ್ನ ಯಶಸ್ವಿಯಾಗಲಿ ಅಂದ್ರು ವಿ.ಹರಿಕೃಷ್ಣ.

ಶೈಲಜಾನಾಗ್ ಅವರು ಹೇಳುವ ಪ್ರಕಾರ ಪ್ರತಿಯೊಂದು ಸಿನಿಮಾದ ಹಿಂದೆ ಶ್ರಮ ಇದ್ದೇ ಇರುತ್ತದೆ. ಯಾವುದೇ ನಿರ್ಮಾಪಕ ಹಣ ವಾಪಸ್ಸು ಬರಲೆಂದೇ ಬಂಡವಾಳ ಹೂಡುತ್ತಾನೆ. ಸುಮ್ಮನೆ ತಮಾಷೆಗೆ ಮಾಡುವುದಿಲ್ಲ. ಇದು ಕೂಡ ವ್ಯಾಪಾರ. ಬೇರೆ ಭಾಷೆಗಳ ನಡುವೆ ನಮ್ಮ ಚಿತ್ರ ಗುರುತಿಸಿಕೊಳ್ಳುವಂತೆ ಮಾಡಬೇಕಾಗಿದೆ. ಆಗ ಮಾತ್ರ ಎಲ್ಲಾ ಕಡೆ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಅಂತ ತಿಳಿಸಿದರು.

ಕೆಲವು ಸಲ ಹಾಡು ಬರೆಯುವಾಗ, ಈ ಸಾಲು ಎಲ್ಲೋ ಬಂದಿದೆಯೆಲ್ಲಾ ಅಂತ ಪಕ್ಕಕ್ಕೆ ಇಟ್ಟಿದ್ದುಂಟು. ಆಮೇಲೆ ನಾನೇ ಬರೆದುದಲ್ವ ಅಂತ ಗೊತ್ತಾಗುತ್ತದೆ. ತಂತ್ರಜ್ಞಾನ ಬದಲಾದಂತೆ ಮೂಲ ಹಾಡನ್ನು ಯಾರು ಕೇಳುವುದಿಲ್ಲ. ಕೇವಲ ನಾಲ್ಕು ಸಾಲುಗಳನ್ನು ಆಲಿಸುತ್ತಾರೆ. ಇದರಿಂದ ಕಲೆಯ ಮೇಲೆ ಜವಬ್ದಾರಿ ಮತ್ತು ಚ್ಯಾಲೆಂಜ್ ಬಹಳ ಜಾಸ್ತಿ ಇರುತ್ತದೆ. ಇದಕ್ಕಾಗಿ ತಂಡಕ್ಕೆ ಅಭಿನಂದನೆಗಳನ್ನು ಹೇಳ್ತನೆ. ಮಗ ತನಗೆ ಇಷ್ಟವಾದುದನ್ನು ಮಾಡಿದ್ದರಿಂದ ಖುಷಿಯಾಗಿದೆ. ನಿರ್ದೇಶಕರು ಹಾಡು ಬರೆದುಕೊಡಿ ಎಂದು ಕೇಳಿಕೊಂಡು ಬಂದಾಗ, ನನ್ನ ಹಾಡು ಹಿಟ್ ಆಗಲೆಂದು ಬರೆಯುತ್ತೇನೆ. ಅದರಿಂದ ನಿಮ್ಮ ಚಿತ್ರಕ್ಕೆ ಸಹಾಯವಾಗಲಿ. ಹಾಡು ಚಿತ್ರದ ನಿರೂಪಣೆಯ ಭಾಗವಾಗಿರುತ್ತದೆ. ಇಂತಹ ಹೊಸ ತಲೆಮಾರಿನ ಚಿತ್ರಗಳು ಜನರಿಗೆ ತಲುಪಲಿ ಎಂದು ಜಯಂತ್ ಕಾಯ್ಕಿಣಿ ಹೇಳಿದರು.

ಬೆಂಗಳೂರಿನಂಥ ಮಹಾನಗರಿಯಲ್ಲಿ ನಿರಾಸೆಗೊಳಗಾದ ಯುವ ಸಮೂಹ. ರಾಜಕೀಯ, ಅಪರಾಧ ಸೇರಿದಂತೆ ಒಂದಷ್ಟು ಸಾಮಾಜಿಕ ಅಂಶಗಳು ಚಿತ್ರದಲ್ಲಿದೆ. ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಥಾನಾಯಕ ಹೇಗೆ ಈ ವ್ಯವಸ್ಥೆಯ ಚಕ್ರವ್ಯೂಹಕ್ಕೆ ಸಿಲುಕುತ್ತಾನೆ. ಆತನನ್ನು ಪಟ್ಟಭದ್ರರು ಹೇಗೆಲ್ಲಾ ಬಳಸಿಕೊಳ್ಳುತ್ತಾರೆ. ಆ ಕ್ಷಣದೊಂದು ನಿರ್ಧಾರ ಆತನ ಬದುಕನ್ನು ಯಾವ ದಿಕ್ಕಿನತ್ತ ಮುನ್ನಡೆಸುತ್ತೆ ಎಂಬಂತಹ ಸನ್ನಿವೇಶಗಳನ್ನು ತೋರಿಸಲಾಗುತ್ತಿದೆ. ಒಟ್ಟಾರೆಯಾಗಿ ಈ ದಿನಮಾನದ ಮಟ್ಟಿಗೆ ವಿಭಿನ್ನ ಚಿತ್ರವಾಗಲಿದೆಯಂತೆ.

ನಾಯಕನಾಗಿ ಬಿ.ವಿ.ಭರತ್, ಪ್ರಣವ್‍ಶ್ರೀಧರ್, ವಿನೋದ್‍ರವೀಂದ್ರನ್, ಗೋಪಾಲ್ ಕೃಷ್ಣ ದೇಶಪಾಂಡೆ ಉಳಿದಂತೆ ಬಹುತೇಕ ರಂಗಭೂಮಿ ಪ್ರತಿಭೆಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಆಸ್ಕರ್ ಪ್ರಶಸ್ತಿ ವಿಜೇತ ಎಲಿಫೆಂಟ್ ವಿಸ್ಪರ್ಸ್ ಚಿತ್ರದ ಭಾಗವಾಗಿದ್ದ ಶ್ರೇಯಾಂಕ್ ನಂಜಪ್ಪ ಶಬ್ಧ ಸಂಯೋಜನೆ ಮಾಡಿದ್ದಾರೆ. ಬೆಂಗಳೂರು ಸುತ್ತಮುತ್ತ, ಕೋಲಾರದಲ್ಲಿ ಚಿತ್ರೀಕರಣ ನಡೆಸಲಾಗಿದೆ.

The lyrical video of the bundle is out! The film will be released soon.
Share. Facebook Twitter LinkedIn WhatsApp Email

Related Posts

‘ಕಪಟ ನಾಟಕ ಸೂತ್ರಧಾರಿ’ಯ ಟ್ರೈಲರ್ ಬಿಡುಗಡೆ: ಜುಲೈ.4ರಂದು ಚಿತ್ರ ತೆರೆಗೆ

20/06/2025 4:57 PM2 Mins Read

BREAKING: ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶಿರೋಡ್ಕರ್ ಗೆ ಕೋವಿಡ್-19 ಪಾಸಿಟಿವ್ | Shilpa Shirodkar

19/05/2025 3:04 PM1 Min Read

BREAKING : ಇಟ್ಟಿಗೆ ಗೂಡುಗಳಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 90 ಕ್ಕೂ ಹೆಚ್ಚು ಬಾಂಗ್ಲಾದೇಶಿ ಪ್ರಜೆಗಳು ಅರೆಸ್ಟ್.!

17/05/2025 1:00 PM1 Min Read
Recent News

BREAKING : ಜುಲೈ 21ರಿಂದ ಸಂಸತ್ತಿನ ‘ಮಳೆಗಾಲದ ಅಧಿವೇಶನ’ ಆರಂಭ, ಆಗಸ್ಟ್ 21ಕ್ಕೆ ಮುಕ್ತಾಯ

03/07/2025 7:53 AM

GOOD NEWS: ರಾಜ್ಯದಲ್ಲಿ ನಿರಂತರ ‘ಕಣ್ಣಿನ ಆರೋಗ್ಯ’ ಒದಗಿಸುವ ‘ಆಶಾಕಿರಣ ದೃಷ್ಟಿ ಕೇಂದ್ರ’ಗಳ ಆರಂಭ

03/07/2025 7:51 AM

‘ಹಾಲಿವುಡ್ ವಾಕ್ ಆಫ್ ಫೇಮ್ ತಾರೆ’ ಗೌರವಕ್ಕೆ ಪಾತ್ರರಾದ ದೀಪಿಕಾ ಪಡುಕೋಣೆ | Hollywood Walk of Fame star

03/07/2025 7:49 AM

ಬಾಲಿಯಲ್ಲಿ 65 ಜನರನ್ನು ಹೊತ್ತ ದೋಣಿ ಮುಳುಗಿ 43 ಮಂದಿ ನಾಪತ್ತೆ , ನಾಲ್ವರು ಸಾವು

03/07/2025 7:42 AM
State News
KARNATAKA

GOOD NEWS: ರಾಜ್ಯದಲ್ಲಿ ನಿರಂತರ ‘ಕಣ್ಣಿನ ಆರೋಗ್ಯ’ ಒದಗಿಸುವ ‘ಆಶಾಕಿರಣ ದೃಷ್ಟಿ ಕೇಂದ್ರ’ಗಳ ಆರಂಭ

By kannadanewsnow0903/07/2025 7:51 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ನಿರಂತರ ಕಣ್ಣಿನ ಆರೋಗ್ಯ ಒದಗಿಸುವ ಸಲುವಾಗಿ ಆಶಾಕಿರಣ ದೃಷ್ಟಿ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ. ಈ ಮೂಲಕ ಕಣ್ಣಿನ ದೃಷ್ಟಿ…

ALERT : ಅಪ್ರಾಪ್ತ ಮಕ್ಕಳಿಗೆ ಬೈಕ್ ಕೊಡುವ ಪೋಷಕರೇ ಎಚ್ಚರ : ತಂದೆಗೆ 30,000 ರೂ.ದಂಡ, 1 ದಿನ ಜೈಲು ಶಿಕ್ಷೆ.!

03/07/2025 7:40 AM

ಉದ್ಯೋಗವಾರ್ತೆ : ರಾಜ್ಯ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ‘6,770 ಡಿ-ಗ್ರೂಪ್ ನೌಕರ’ರ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್

03/07/2025 7:33 AM

BIG NEWS : ಜುಲೈ 5ರಿಂದ ರಾಜ್ಯಾದ್ಯಂತ ʻSSLC ಪರೀಕ್ಷೆ-3ʼ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | Karnataka SSLC Exam-3

03/07/2025 7:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.