*ಅವಿನಾಶ್ ಆರ್ ಭೀಮಸಂದ್ರ
ನವದೆಹಲಿ: ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣಾ ಆಯೋಗ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಮಾಡಲಿದೆ ಅಂತ ತಿಳಿದು ಬಂದಿದೆ. ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ನಾಳೆ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಿದೆ. ಈ ಪ್ರಕಟಣೆಯನ್ನು ಇಸಿಐನ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.
2024 ರ ಸಾರ್ವತ್ರಿಕ ಚುನಾವಣೆ ಮತ್ತು ಕೆಲವು ರಾಜ್ಯ ವಿಧಾನಸಭೆಗಳ ವೇಳಾಪಟ್ಟಿಯನ್ನು ಪ್ರಕಟಿಸಲು ಚುನಾವಣಾ ಆಯೋಗವು ಮಾರ್ಚ್ 16 ರಂದು ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದೆ. ಇದನ್ನು ಇಸಿಐನ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ ಅಂತ ಇಸಿಐ ತಿಳಿಸಿದೆ.
ಕಳೆದ ಬಾರಿ 7 ಹಂತಗಳಲ್ಲಿ ಚುನಾವಣೆ ನಡೆದಿತ್ತು : 2019 ರಲ್ಲಿ ಲೋಕಸಭಾ ಚುನಾವಣೆ ಏಳು ಹಂತಗಳಲ್ಲಿ ನಡೆಯಿತು. ಕಳೆದ ಬಾರಿ ಮಾರ್ಚ್ 10ರಂದು ಚುನಾವಣಾ ಆಯೋಗ ಚುನಾವಣಾ ದಿನಾಂಕವನ್ನು ಘೋಷಿಸಿತ್ತು. ಏಪ್ರಿಲ್ 11 ರಂದು ಮೊದಲ ಹಂತದ ಮತದಾನ ನಡೆದಿದ್ದರೆ, ಮೇ 19 ರಂದು ಕೊನೆಯ ಹಂತದ ಮತದಾನ ನಡೆದಿತ್ತು. ಮೇ 23ರಂದು ಫಲಿತಾಂಶ ಹೊರಬಿದ್ದಿತ್ತು. ಆ ಚುನಾವಣೆಯ ಸಮಯದಲ್ಲಿ, ದೇಶದಲ್ಲಿ 91 ಕೋಟಿಗೂ ಹೆಚ್ಚು ಮತದಾರರಿದ್ದರು, ಅದರಲ್ಲಿ 67 ಪ್ರತಿಶತದಷ್ಟು ಜನರು ಮತ ಚಲಾಯಿಸಿದ್ದರು.
2019 ರ ಫಲಿತಾಂಶಗಳು ಯಾವುವು?
2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 2014 ಕ್ಕಿಂತ ದೊಡ್ಡ ಗೆಲುವು ಸಾಧಿಸಿತ್ತು. 2014 ರಲ್ಲಿ ಬಿಜೆಪಿ 282 ಸ್ಥಾನಗಳನ್ನು ಗೆದ್ದರೆ, 2019 ರಲ್ಲಿ ಅದು 303 ಸ್ಥಾನಗಳನ್ನು ಗೆದ್ದಿದೆ. ಅದೇ ಸಮಯದಲ್ಲಿ, ಎನ್ಡಿಎ 353 ಸ್ಥಾನಗಳನ್ನು ಗೆದ್ದಿತ್ತು. ಬಿಜೆಪಿ ಶೇ.37.7ರಷ್ಟು ಮತಗಳನ್ನು ಪಡೆದರೆ, ಎನ್ಡಿಎ ಶೇ.45ರಷ್ಟು ಮತಗಳನ್ನು ಪಡೆದಿದೆ. ಕಾಂಗ್ರೆಸ್ 52 ಸ್ಥಾನಗಳನ್ನು ಗೆದ್ದಿತ್ತು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಮೂರನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವ ನಿರೀಕ್ಷೆಯಲ್ಲಿದೆ ನಾಳೆ ಯಾವುದೇ ಹೊಸ ನೀತಿ ನಿರ್ಧಾರಗಳನ್ನು ಘೋಷಿಸದಂತೆ ಅಧಿಕಾರದಲ್ಲಿರುವ ಸರ್ಕಾರವನ್ನು ನಿರ್ಬಂಧಿಸುವ ಮಾದರಿ ನೀತಿ ಸಂಹಿತೆ, ಘೋಷಣೆಯಾದ ತಕ್ಷಣ ಜಾರಿಗೆ ಬರುತ್ತದೆ.
Press Conference by the Election Commission to announce the schedule for General Elections 2024 & some State Assemblies will be held at 3 pm tomorrow, 16th March. It will be live streamed on the social media platforms of the ECI: ECI pic.twitter.com/JVGGQfMYgw
— ANI (@ANI) March 15, 2024