ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇನ್ಮುಂದೆ ಜನನ-ಮರಣ ನೋಂದಣಿ ಸೇವೆ ಸಿಗಲಿದೆ.
ಈ ಕುರಿತು ರಾಜ್ಯ ಸರ್ಕಾರವು ಆದೇಶ ಹೊರಡಿಸಿದ್ದು, ಬಾಪೂಜಿ ಸೇವಾ ಕೇಂದ್ರಗಳಲ್ಲಿ 73ನೇ ಸೇವೆಯಾಗಿ ಜನನ ಮತ್ತು ಮರಣ ನೋಂದಣಿ ಸೇವೆ ಆರಂಭವಾಗಿದೆ. ಪಂಚಾಯತ್ ರಾಜ್ ವ್ಯವಸ್ಥೆಗೆ ನಾಂದಿ ಹಾಡಿದ ಸಂವಿಧಾನದ 73ನೇ ತಿದ್ದುಪಡಿಗೆ 30 ವರ್ಷಗಳು ತುಂಬಿದ ಸವಿನೆನಪಿನಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪನೋಂದಣಾಧಿಕಾರಿಗಳಾಗಿ ನೇಮಿಸಿ ಸರ್ಕಾರ ಆದೇಶಿಸಿದೆ. ಈ ಮೂಲಕ ಜನನ – ಮರಣ ಪ್ರಮಾಣಪತ್ರ ಪಡೆಯುವುದು ಇನ್ನಷ್ಟು ಸುಲಭವಾಗಿದೆ.