ಕಲಬುರಗಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಕಲಬುರ್ಗಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದು, ಕಲ್ಬುರ್ಗಿ ನೆಲದಿಂದಲೇ ರಾಜ್ಯದಲ್ಲಿ ಚುನಾವಣೆ ಕಹಳೆ ಮೊಳಗಿಸಿದ್ದಾರೆ. ಕುಟುಂಬ ರಾಜಕೀಯ ಭ್ರಷ್ಟಾಚಾರ ಕಾಂಗ್ರೆಸ್ ನವರಿಗೆ ಆಕ್ಸಿಜನ್ ಆಗಿದೆ ಎಂದು ಸರ್ಕಾರದ ವಿರುದ್ಧ ಮೋದಿ ವಾಗ್ದಾಳಿ ನಡೆಸಿದರು.
ಪುಲ್ಕಿತ್ ಸಾಮ್ರಾಟ್ ಜೊತೆ ಸಪ್ತಪದಿ ತುಳಿದ ನಟಿ ‘ಕೃತಿ ಖರ್ಬಂದಾ’ ; ಮದುವೆ ಫೋಟೋಗಳು ಬಹಿರಂಗ
ನಗರದ ಎನ್ವಿ ಕಾಲೇಜ್ ಮೈದಾನದಲ್ಲಿ ನಡೆದ ಬಿಜೆಪಿ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಬಗ್ಗೆ ಜನರು ಆಕ್ರೋಶಗೊಂಡಿದ್ದಾರೆ. ಭಾಷಣದಲ್ಲಿ ರಾಜ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೋದಿ ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ‘ರಾಜ್ಯ ಸರ್ಕಾರಿ ನೌಕರ’ರ ಮೂಗಿಗೆ ತುಪ್ಪ ಸವರಿದ್ದಾರೆ: ಬೊಮ್ಮಾಯಿ
ರಾಜ್ಯ ಸರ್ಕಾರ ಇಷ್ಟು ಬೇಗ ಜನರ ಆಕ್ರೋಶಕ್ಕೆ ಗುರಿಯಾಗಿದೆ. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಜನರ ಮನಸ್ಸಿನಲ್ಲಿ ಭರವಸೆಯೇ ಇಲ್ಲದಂತಾಗಿದೆ. ಕಾಂಗ್ರೆಸ್ ಸರ್ಕಾರ ಲೂಟಿಯಲ್ಲಿ ತೊಡಗಿದೆ. ಕಾಂಗ್ರೆಸ್ಗೆ ಭ್ರಷ್ಟಾಚಾರವೇ ಉಸಿರಾಗಿದೆ ಎಂದು ವಾಗ್ದಾಳಿ ನಡೆಸಿದರು.
ತಮಿಳುನಾಡು ಕನ್ಯಾಕುಮಾರಿ ಕೇರಳಕ್ಕೂ ಭೇಟಿ ನೀಡಿದ್ದೆ. ತೆಲಂಗಾಣದ ಜನರು ಅಪಾರ ಪ್ರೀತಿ ತೋರಿಸಿದ್ದಾರೆ ವಿಕಸಿತ್ ಭಾರತ ನಿರ್ಮಾಣಕ್ಕೆ ನಾವು ಸಂಕಲ್ಪ ಮಾಡಿದ್ದೇವೆ.ವಿಕಸಿತ್ ಭಾರತದ ನಿರ್ಮಾಣಕ್ಕೆ ಬಿಜೆಪಿಗೆ ಜನ ಆಶೀರ್ವದಿಸುತ್ತಾರೆ ಮೋದಿ ಸರ್ಕಾರ ಅನ್ನೋ ಕಹಳೆ ಮೊಳಗಿದೆ ಎಂದು ತಿಳಿಸಿದರು.
BREAKING : ಬೆಂಗಳೂರಲ್ಲಿ ‘ಮಹಿಳಾ’ ಸಿಬ್ಬಂದಿಗೆ ‘ಮೆಟ್ರೋ’ ಅಧಿಕಾರಿಯಿಂದ ‘ಲೈಂಗಿಕ ಕಿರುಕುಳ’ : ‘FIR’ ದಾಖಲು
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಬಗ್ಗೆ ಜನ ಆಕ್ರೋಶಗೊಂಡಿದ್ದಾರೆ. ಕಾಂಗ್ರೆಸ್ನವರು ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಕಾಂಗ್ರೆಸ್ ಮೇಲೆ ದೇಶದ ಜನರಿಗೆ ನಂಬಿಕೆ ಹೋಗಿದೆ ಲೋಕಸಭೆ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸುತ್ತಾರೆ. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ, ಕೈ ಸರ್ಕಾರದ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಸರಿ ಇಲ್ಲ. ಭ್ರಷ್ಟಾಚಾರದಲ್ಲಿ ಕಾಂಗ್ರೆಸ್ ಮುಳುಗಿ ಹೋಗಿದೆ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದರು.