ನವದೆಹಲಿ: ಲೋಕಸಭಾ ಚುನಾವಣೆಯ ಜೊತೆ ಜೊತೆಗೆ ವಿವಿಧ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಯನ್ನು ಕೂಡ ಚುನಾವಣಾ ಆಯೋಗದಿಂದ ಇಂದು ಘೋಷಣೆ ಮಾಡಲಾಗಿದೆ. ರಾಜ್ಯದ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ.
ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಕೇಂದ್ರ ಚುನಾವಣಾ ಆಯೋಗದ ಆಯುಕ್ತರು, ಕರ್ನಾಟಕದ ಯಾದಗಿರಿ ಜಿಲ್ಲಿಯೆ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆಯಲ್ಲಿ ಮೇ.7ರಂದು ನಡೆಸಲಾಗುತ್ತದೆ. ಮೇ.7ರಂದು ನಡೆದಂತ ಮತದಾನದ ಮತಏಣಿಕೆ ಕಾರ್ಯವು ಜೂನ್.4ರಂದು ನಡೆಯಲಿದೆ. ಅಂದೇ ಫಲಿತಾಂಶ ಪ್ರಕಟವಾಗಲಿದೆ ಎಂದರು.
ಒಟ್ಟಾರೆಯಾಗಿ ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗೆ ಮೇ 7ರಂದು ಎರಡನೇ ಹಂತದ ಚುನಾವಣೆ ನಡೆಯಲಿದ್ದು ಅದೇ ದಿನ ಸುರಪುರದಲ್ಲೂ ಉಪಚುನಾವಣೆ ನಡೆಯಲಿದೆ. ಹೀಗಾಗಿ ಸುರಪುರ ವಿಧಾನಸಭಾ ಕ್ಷೇತ್ರದ ಜನರು ಲೋಕಸಭೆ ಮತ್ತು ವಿಧಾನಸಭೆಗೆ ಎರಡಕ್ಕೂ ಮತವನ್ನು ಚಲಾಯಿಸಲಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ : ಕಾಂಗ್ರೆಸ್ ಸರ್ಕಾರ ಲೂಟಿಯಲ್ಲಿ ತೊಡಗಿದೆ : ಪ್ರಧಾನಿ ಮೋದಿ ವಾಗ್ದಾಳಿ
ಲೋಕಸಭಾ ಚುನಾವಣೆ : ಮಣಿಪುರ ಗಲಭೆಯ ಸಂತ್ರಸ್ತರಿಗೆ ನಿರಾಶ್ರಿತ ಕೇಂದ್ರದಿಂದಲೇ ಮತದಾನಕ್ಕೆ ಅವಕಾಶ!