ಬೆಂಗಳೂರು : ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಭೀಕರ ಬಲವಾದ ಸಂಭವಿಸಿದ್ದು, ನಿಯಂತ್ರಣ ತಪ್ಪಿ ಫ್ಲೈ ಓವರ್ ಮೇಲಿಂದ ಬಿದ್ದು ಚಾಲಕ ಮೃತಪಟ್ಟಿರುವ ಘಟನೆ ಬೆಂಗಳೂರು ಮೈಸೂರು ಹೆದ್ದಾರಿಯ ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ನಡೆದಿದೆ.
ಘಟನೆಯು ಬೆಂಗಳೂರು ಮೈಸೂರು ಹೆದ್ದಾರಿಯ ರಾಮನಗರ ತಾಲೂಕಿನ ಕೆಂಪೇಗೌಡನದೊಡ್ಡಿ ಬಳಿ ನಡೆದಿದೆ.ಅತ್ಯಂತ ವೇಗವಾಗಿ ಬಂದಂತ ಕಾರು ಹೆದ್ದಾರಿಯ ಅಂಡರ್ ಪಾಸ್ಗೆ ಉರುಳಿದ ಕಾರು ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿದ್ದ ಚಾಲಕ ಸ್ಥಳದಲ್ಲೆ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ.
ಮಾಹಿತಿ ತಿಳಿಯುತ್ತಿದ್ದಂತೆ ರಾಮನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದ ಅಭಿಷೇಕ್ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಕುರಿತು ರಾಮನಗಲ ಪೊಲೀಸ್ ಠಾಣಯಲ್ಲಿ ಪ್ರಕರಣ ದಾಖಲಾಗಿದೆ.