ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ( Indian Premier League- IPL) ಅನ್ನು ವಿದೇಶಕ್ಕೆ ಸ್ಥಳಾಂತರಿಸುವುದಿಲ್ಲ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ( Board of Control for Cricket in India -BCCI) ಕಾರ್ಯದರ್ಶಿ ಜಯ್ ಶಾ ( secretary Jay Shah ) ಸಂದರ್ಶನವೊಂದರಲ್ಲಿ ಖಚಿತಪಡಿಸಿದ್ದಾರೆ.
ಭಾರತದಲ್ಲಿ ಸಾರ್ವತ್ರಿಕ ಚುನಾವಣೆ ಇರುವುದರಿಂದ ಟಿ20 ಲೀಗ್ ಅನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೆ ಸ್ಥಳಾಂತರಿಸಬಹುದು ಎಂಬ ವರದಿಗಳ ನಂತರ ಈ ಬೆಳವಣಿಗೆ ನಡೆದಿದೆ.
ಸಾರ್ವತ್ರಿಕ ಚುನಾವಣೆಯ ದಿನಾಂಕಗಳನ್ನು ಶನಿವಾರ ಘೋಷಿಸಲಾಯಿತು. ಚುನಾವಣಾ ದಿನಾಂಕ ಘೋಷಣೆಯಾದ ನಂತರ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸಂದರ್ಶನವೊಂದರಲ್ಲಿ ಐಪಿಎಲ್ ಅನ್ನು ಸ್ಥಳಾಂತರಿಸುವುದಿಲ್ಲ ಎಂದು ಹೇಳಿದರು.
“ಇಲ್ಲ, ಇದನ್ನು ವಿದೇಶಕ್ಕೆ ಸ್ಥಳಾಂತರಿಸಲಾಗುವುದಿಲ್ಲ” ಎಂದು ಶಾ ಶನಿವಾರ ಕ್ರಿಕ್ಬಝ್ಗೆ ತಿಳಿಸಿದರು. ಏಪ್ರಿಲ್ 19 ರಿಂದ ಜೂನ್ 4 ರವರೆಗೆ ಚುನಾವಣೆ ನಡೆಯಲಿದೆ. ಮಾರ್ಚ್ 22ರಿಂದ ಐಪಿಎಲ್ ಆರಂಭವಾಗಲಿದೆ. ಇಲ್ಲಿಯವರೆಗೆ, ಮೊದಲ ಎರಡು ವಾರಗಳ ದಿನಾಂಕಗಳನ್ನು ಘೋಷಿಸಲಾಗಿದೆ.
ಲೋಕಸಭಾ ಚುನಾವಣೆ : ಮಣಿಪುರ ಗಲಭೆಯ ಸಂತ್ರಸ್ತರಿಗೆ ನಿರಾಶ್ರಿತ ಕೇಂದ್ರದಿಂದಲೇ ಮತದಾನಕ್ಕೆ ಅವಕಾಶ!
BREAKING : ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ ಪ್ಲೈಓವರ್‌ನಿಂದ ಬಿದ್ದು ಚಾಲಕ ಸಾವು